ಬೆಂಗಳೂರು: ಕಗ್ಗಲೀಪುರ ಪೊಲೀಸ್ ಠಾಣಾ ವ್ಯಾಪ್ತಿಯ ವಡೇರಹಳ್ಳಿಯ ಸೇತುವೆ ಬಳಿ ಜಿಲೆಟಿನ್ ಕಡ್ಡಿಗಳು ಪತ್ತೆಯಾದ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳವು (ಎನ್ಐಎ) ಕೈಗೆತ್ತಿಕೊಂಡಿದೆ.

ಸ್ಥಳಕ್ಕೆ ಎನ್ಐಎ, ಕೇಂದ್ರ ಗುಪ್ತಚರದ ಅಧಿಕಾರಿಗಳು ಸೋಮವಾರ ಭೇಟಿ ನೀಡಿ ಮಾಹಿತಿ ಕಲೆಹಾಕಿದರು. ಅದಲ್ಲದೇ ಶ್ವಾನದಳ ಹಾಗೂ ವಿಧಿ ವಿಜ್ಞಾನ ಪ್ರಯೋಗಾಲಯದ (ಎಫ್ಎಸ್ಎಲ್) ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿ ಪ್ರಾಥಮಿಕ ಮಾಹಿತಿ ಕಲೆಹಾಕಿದ್ದಾರೆ ಎಂದು ಗೊತ್ತಾಗಿದೆ.

ಆರ್ಟ್ ಆಫ್ ಲಿವಿಂಗ್ನ 45ನೇ ವಾರ್ಷಿಕೋತ್ಸವದಲ್ಲಿ ಭಾಗವಹಿಸಲು ನಗರಕ್ಕೆ ಭಾನುವಾರ ಬಂದಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಸಂಚರಿಸಿದ ನೈಸ್ ರಸ್ತೆಯ ಸಮೀಪದಲ್ಲಿಯೇ ಎರಡು ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ ಆತಂಕಕ್ಕೆ ಕಾರಣವಾಗಿತ್ತು. ಪ್ರಕರಣದ ತನಿಖೆಗೆ ಬೆಂಗಳೂರು ದಕ್ಷಿಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸಗೌಡ ನೇತೃತ್ವದಲ್ಲಿ ಆರು ತಂಡಗಳನ್ನು ರಚಿಸಲಾಗಿದೆ. ಎನ್ಐಎ ಅಧಿಕಾರಿಗಳು ತನಿಖಾ ತಂಡದಿಂದ ಘಟನೆಯ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ. ಪ್ರಧಾನಿಯ ಭದ್ರತೆ ವಿಚಾರವಾಗಿದ್ದರಿಂದ ಪ್ರಕರಣದ ತನಿಖೆಯನ್ನು ಗಂಭೀರವಾಗಿ ಪರಿಗಣಿ ಸಲಾಗಿದೆ ಎಂದು ಮೂಲಗಳು ಹೇಳಿವೆ.

ಉದ್ದೇಶಪೂರ್ವಕವಾಗಿ ಇಟ್ಟಿರುವ ಶಂಕೆ?: ‘ಆರು ತಂಡಗಳು ಎಲ್ಲಾ ಆಯಾಮದಲ್ಲೂ ತನಿಖೆ ನಡೆಸುತ್ತಿವೆ. ಜಿಲೆಟಿನ್ ಕಡ್ಡಿಗಳಿದ್ದ ಬಾಕ್ಸ್ವೊಂದನ್ನು ಉದ್ದೇಶಪೂರ್ವಕವಾಗಿ ರಸ್ತೆಬದಿಯಲ್ಲಿ ಇರಿಸಿರುವುದು ಕಂಡುಬಂದಿದೆ. ಸ್ಫೋಟಕಗಳನ್ನು ಎಷ್ಟು ದಿನಗಳ ಹಿಂದೆ ತಂದು ಎಸೆಯಲಾಗಿದೆ ಎಂಬುದು ಪತ್ತೆಯಾಗಿಲ್ಲ. ಕನಕಪುರ ರಾಷ್ಟ್ರೀಯ ಹೆದ್ದಾರಿಯ ಕುಪ್ಪರೆಡ್ಡಿ ಕೆರೆ ಬಳಿಯಿರುವ ಭೈರವ ಮಂಡ್ಯ ಉಪ್ಪುಸಾರು ಮುದ್ದೆ ಹೋಟೆಲ್ನಿಂದ ಸ್ವಲ್ಪ ದೂರದಲ್ಲಿ ಬಾಕ್ಸ್ ಎಸೆಯಲಾಗಿತ್ತು’ ಎಂದು ಮೂಲಗಳು ಹೇಳಿವೆ.

‘ಘಟನಾ ಸ್ಥಳದ ಸುತ್ತಮುತ್ತ ಸಿ.ಸಿ.ಟಿ.ವಿ ಕ್ಯಾಮೆರಾ ಇಲ್ಲ. ನೈಸ್ ರಸ್ತೆಯ ಪ್ರವೇಶ ಮತ್ತು ನಿರ್ಗಮನ ದ್ವಾರಗಳಲ್ಲಿ ಇರುವ ಸಿ.ಸಿ.ಟಿ.ವಿ ಕ್ಯಾಮೆರಾಗಳಲ್ಲಿ ಸೆರೆಯಾದ ದೃಶ್ಯಾವಳಿಗಳ ಪರಿಶೀಲನೆ ನಡೆಸಲಾಗುತ್ತಿದೆ. ಇದುವರೆಗೂ ನಡೆದ ತನಿಖೆಯಲ್ಲಿ ಆರೋಪಿಯ ಸುಳಿವು ಸಿಕ್ಕಿಲ್ಲ’ ಎಂದು ಅಧಿಕಾರಿಯೊಬ್ಬರು ಹೇಳಿದರು.

ಬೆಂಗಳೂರು ದಕ್ಷಿಣ ಮತ್ತು ರಾಮನಗರ ಭಾಗದ ಕ್ವಾರಿಗಳಲ್ಲಿ ಬಳಕೆಯಾಗುವ ಜಿಲೆಟಿನ್ ಕಡ್ಡಿಗಳ ಬಗ್ಗೆಯೂ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಮೂಲಗಳು ಹೇಳಿವೆ.

ಹೊರ ರಾಜ್ಯಕ್ಕೆ ತನಿಖಾ ತಂಡ: ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನಿಂದ ಸ್ಫೋಟಕಗಳನ್ನು ತಂದು ಇಟ್ಟಿರುವ ಶಂಕೆಯಿದೆ. ತನಿಖೆ ವೇಳೆ ಲಭಿಸಿದ ಕೆಲವು ಸುಳಿವು ಆಧರಿಸಿ ವಿಶೇಷ ಪೊಲೀಸ್ ತಂಡವೊಂದು ತಮಿಳುನಾಡಿಗೆ ತೆರಳಿದೆ ಎಂದು ಅಧಿಕಾರಿಯೊಬ್ಬರು ಹೇಳಿದರು.

ಇನ್ನೊಂದೆಡೆ, ಎಚ್ಎಎಲ್ ಹಾಗೂ ಆರ್ಟ್ ಆಫ್ ಲಿವಿಂಗ್ನಲ್ಲಿ ಸ್ಫೋಟ ನಡೆಸಲಾಗುವುದು ಎಂದು ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿ ಬೆದರಿಕೆ ಹಾಕಿದ್ದ ಆರೋಪಿ, ಕೋರಮಂಗಲದ ನಿವಾಸಿ ಲೋಹಿತ್ ಅವರ ವಿಚಾರಣೆಯನ್ನು ಪೊಲೀಸರು ತೀವ್ರಗೊಳಿಸಿದ್ದಾರೆ.

ವಶಕ್ಕೆ ಪಡೆದಿರುವ ವ್ಯಕ್ತಿ, ಹಿಂದೆಯೂ ಹಲವು ಬಾರಿ ಹುಸಿ ಬೆದರಿಕೆ ಕರೆ ಮಾಡಿದ್ದ. ಆರೋಪಿ ಮಾನಸಿಕ ಸ್ಥಿತಿಯ ಬಗ್ಗೆ ವೈದ್ಯರಿಂದ ಮಾಹಿತಿ ಕೇಳಿದ್ದೇವೆ
ಸೀಮಾಂತ್ ಕುಮಾರ್ ಸಿಂಗ್, ನಗರ ಪೊಲೀಸ್ ಕಮಿಷನರ್

ಕರೆ ಮಾಡಿದ ಬಳಿಕ ಆರೋಪಿ ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದ. ಲೊಕೇಷನ್ ಆಧಾರದ ಮೇಲೆ ಪತ್ತೆ ಹಚ್ಚಿ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.

ವರದಿ ತರಿಸಿಕೊಂಡ ಎನ್ಎಸ್ಜಿ

ಪ್ರಧಾನಿಯವರ ಭದ್ರತೆಯ ಜವಾಬ್ದಾರಿ ಹೊತ್ತಿರುವ ರಾಷ್ಟ್ರೀಯ ಭದ್ರತಾ ಪಡೆಯ (ಎನ್ಎಸ್ಜಿ) ಮುಖ್ಯಸ್ಥರು ಘಟನೆ ಸಂಬಂಧ ರಾಜ್ಯ ಪೊಲೀಸರಿಂದ ಮಾಹಿತಿ ಕೇಳಿದ್ದರು. ಪ್ರಕರಣದ ತನಿಖೆಯ ಪ್ರಾಥಮಿಕ ವರದಿಯನ್ನು ಅವರಿಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಮೂಲಗಳು ಹೇಳಿವೆ.

ಬೆಂಕಿಕಡ್ಡಿ, ಕರ್ಪೂರದ ಖಾಲಿ ಡಬ್ಬಿಗಳು ಪತ್ತೆ

ಬೆಂಗಳೂರು–ಕನಕಪುರ ರಸ್ತೆಯ ಪೂರ್ವ ದಿಕ್ಕಿನ ಖಾಲಿ ಜಾಗದಲ್ಲಿ ಜಿಪ್ ಹಾಕಿದ್ದ ಪಾರದರ್ಶಕ ಪ್ಲಾಸ್ಟಿಕ್ ಕವರ್ವೊಂದು ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಭದ್ರತೆಯ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಪೊಲೀಸ್ ಸಿಬ್ಬಂದಿಗೆ ಸಿಕ್ಕಿತ್ತು. ಅನುಮಾನಗೊಂಡು ಕವರ್ ತೆರೆದು ಪರಿಶೀಲಿಸಿದಾಗ ಅದರೊಳಗೆ ರಟ್ಟಿನ ಬಾಕ್ಸ್ ಇತ್ತು. ಅದರಲ್ಲಿ ಜಿಲೆಟಿನ್ ಕಡ್ಡಿಗಳ ಜತೆಗೆ ಬೆಂಕಿ ಕಡ್ಡಿಗಳು, ಕರ್ಪೂರದ ಖಾಲಿ ಡಬ್ಬಿಗಳು ಇರುವುದು ಕಂಡುಬಂದಿತ್ತು ಎಂದು ಮೂಲಗಳು ಹೇಳಿವೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-4-639342917

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.