ಬೆಂಗಳೂರು: ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಎನ್ಆರ್ಐ ಲೇಔಟ್ನಲ್ಲಿ ಐದು ಅಂತಸ್ತಿನ ಕಟ್ಟಡದ ಮೇಲೇರಿ ಆತ್ಮಹತ್ಯೆಗೆ ಯತ್ನಿಸಿದ್ದ 16 ವರ್ಷದ ಬಾಲಕಿಯನ್ನು ಹೊಯ್ಸಳ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ.

ಗುರುವಾರ ಮಧ್ಯಾಹ್ನ ಕಟ್ಟಡದ ಮೇಲೇರಿದ ಬಾಲಕಿ ‘ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ’ ಎಂದು ಜೋರಾಗಿ ಕಿರುಚಿದ್ದಳು. ಅದನ್ನು ಗಮನಿಸಿದ್ದ ಸ್ಥಳೀಯರು, ಹೊಯ್ಸಳ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ನೀಡಿದ್ದರು. ತಕ್ಷಣವೇ ಅಗ್ನಿಶಾಮಕ ಸಿಬ್ಬಂದಿಗೂ ಮಾಹಿತಿ ನೀಡಿದ್ದ ಹೊಯ್ಸಳ ಸಿಬ್ಬಂದಿ ಸ್ಥಳಕ್ಕೆ ಬಂದರು.

ರಾಮಮೂರ್ತಿ ನಗರ ಠಾಣೆ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸಾರ್ವಜನಿಕರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಬಾಲಕಿಯನ್ನು ರಕ್ಷಿಸಿದರು. ಕಾರ್ಯಾಚರಣೆಯ ವಿಡಿಯೊವನ್ನು ಪೂರ್ವ ವಿಭಾಗದ ಡಿಸಿಪಿ ತಮ್ಮ ‘ಎಕ್ಸ್’ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಸಿಬ್ಬಂದಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬಾಲಕಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ನಿಮ್ಹಾನ್ಸ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಬಾಲಕಿ ಯಾವ ಕಾರಣಕ್ಕೆ ಆತ್ಮಹತ್ಯೆಗೆ ಯತ್ನಿಸಿದ್ದಳು ಎಂಬುದು ತಿಳಿದುಬಂದಿಲ್ಲ. ಪೋಷಕರಿಗೂ ಮಾಹಿತಿ ನೀಡಲಾಗಿದೆ ಎಂದು ಪೊಲೀಸರು ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-4-1072877507

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.