ಬೆಂಗಳೂರು ಕೃಷಿ ವಿಶ್ವವಿದ್ಯಾಲಯವು ಜಿಕೆವಿಕೆ ಆವರಣದಲ್ಲಿ ಶನಿವಾರ ಬೆಳಿಗ್ಗೆ 7ರಿಂದ ಸಂಜೆ 4 ಗಂಟೆಯವರೆಗೆ ರೈತ ಸಂತೆ ಹಮ್ಮಿಕೊಂಡಿದೆ.

ಹಲಸು, ಮಾವು, ಸೀಬೆ, ದ್ರಾಕ್ಷಿ, ಕಲ್ಲಂಗಡಿ ಹಾಗೂ ಕರಬೂಜ ಹಣ್ಣು, ಗಿಣ್ಣು, ತಾಜಾ ಹಣ್ಣಿನ ಪಾನೀಯಗಳು, ಸಿರಿಧಾನ್ಯದ ಹಪ್ಪಳ ಮತ್ತು ಸಂಡಿಗೆ, ಹುರಿಗಾಳು, ಮೌಲ್ಯವರ್ಧಿತ ಸಿರಿಧಾನ್ಯ ಪದಾರ್ಥಗಳು, ಸಾವಯವ ಉತ್ಪನ್ನಗಳು, ರಾಜಮುಡಿ ಅಕ್ಕಿ, ತಾಜಾ ಅಣಬೆ, ಆಲಂಕಾರಿಕ ಮೀನಿನ ಮರಿಗಳು ಈ ಬಾರಿಯ ರೈತ ಸಂತೆಯ ವಿಶೇಷವಾಗಿದೆ. ಇದರ ಜತೆಗೆ ವಿವಿಧ ಹಣ್ಣು ಹಾಗೂ ತರಕಾರಿಗಳು ಸಂತೆಯಲ್ಲಿ ಸಿಗಲಿವೆ.

ಸುಗಂಧ ಮತ್ತು ಔಷಧೀಯ ಸಸ್ಯಗಳು, ಆಲಂಕಾರಿಕ ಗಿಡಗಳು, ಜೈವಿಕ ಗೊಬ್ಬರ, ಕೃಷಿ ಯಂತ್ರೋಪಕರಣಗಳು, ಎರೆಹುಳು ಗೊಬ್ಬರ, ಜೈವಿಕ ಕೀಟನಾಶಕ, ಕರಕುಶಲ ವಸ್ತುಗಳು, ಅಡಿಕೆ ಉತ್ಪನ್ನಗಳು, ರೇಷ್ಮೆ ಕೃಷಿಯ ಉಪ ಉತ್ಪನ್ನಗಳು, ಜೇನು ಕೃಷಿ, ವಾಣಿಜ್ಯ ಉತ್ಪನ್ನಗಳು ಸಂತೆಯಲ್ಲಿ ಇರಲಿವೆ.

ಕೃಷಿ ಪ್ರಕಟಣೆಗಳು ಹಾಗೂ ವಿಶ್ವವಿದ್ಯಾಲಯದ ವಿಶೇಷತೆಯ ಬಗ್ಗೆ ಮಾಹಿತಿ ದೊರೆಯಲಿದೆ. ಕೃಷಿ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟದ ವ್ಯವಸ್ಥೆಯಿರುತ್ತದೆ. ಸಾರ್ವಜನಿಕರು ಮತ್ತು ರೈತರು ಈ ವಿನೂತನ ಸಂತೆಯ ಪ್ರಯೋಜನ ಪಡೆದುಕೊಳ್ಳಬೇಕು ಎಂದು ವಿಶ್ವವಿದ್ಯಾಲಯದ ಹಿರಿಯ ವಾರ್ತಾತಜ್ಞ ಕೆ.ಪಿ. ರಘುಪ್ರಸಾದ್ ಮನವಿ ಮಾಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-4-171708297

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.