ಬೆಂಗಳೂರು: ಗೋವಿಂದರಾಜನಗರ ದಲ್ಲಿ 100 ಹಾಸಿಗೆಗಳ ಜಯದೇವ ಘಟಕವನ್ನು ಸ್ಥಾಪಿಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಜತೆಗೆ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಒಪ್ಪಂದ ಮಾಡಿಕೊಂಡಿದೆ.

ನಗರದಲ್ಲಿ ಶುಕ್ರವಾರ ಈ ಘಟಕ ಸ್ಥಾಪನೆಗೆ ಸಂಬಂಧಿಸಿದಂತೆ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ ಅವರ ಸಮ್ಮುಖದಲ್ಲಿ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಬಿ. ದಿನೇಶ್ ಮತ್ತು ಜಿಬಿಎ ಮುಖ್ಯ ಆಯುಕ್ತ ಎನ್. ಮಹೇಶ್ವರ ರಾವ್ ಅವರು ಒಪ್ಪಂದಕ್ಕೆ ಸಹಿ ಹಾಕಿದರು.

ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವೈದ್ಯಕೀಯ ಶಿಕ್ಷಣ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮೊಹಮ್ಮದ್ ಮೊಹ್ಸಿನ್, ಪಶ್ಚಿಮ ಮಹಾನಗರ ಪಾಲಿಕೆ ಆಯುಕ್ತ ಕೆ.ವಿ. ರಾಜೇಂದ್ರ ಉಪಸ್ಥಿತರಿದ್ದರು. ಈ ಒಪ್ಪಂದದ ಅನುಸಾರ ಜಿಬಿಎ ವ್ಯಾಪ್ತಿಯಲ್ಲಿರುವ ಮಲ್ಟಿಸ್ಪೆಷಾಲಿಟಿ ಕಟ್ಟಡದಲ್ಲಿ ಜಯದೇವ ಘಟಕ ಶೀಘ್ರದಲ್ಲಿಯೇ ಪ್ರಾರಂಭವಾಗಲಿದೆ.

‘ಬೆಂಗಳೂರಿನ ಪಶ್ಚಿಮ ಭಾಗದ ಜನರಿಗೂ ಹೃದಯ ಆರೈಕೆ ಸೇವೆಯನ್ನು ಒದಗಿಸಲು ಇದು ಉತ್ತಮ ಹೆಜ್ಜೆಯಾಗಿದೆ’ ಎಂದು ಶರಣಪ್ರಕಾಶ್ ಪಾಟೀಲ ಹೇಳಿದರು.

ಶಾಸಕ ಪ್ರಿಯಕೃಷ್ಣ, ‘100 ಹಾಸಿಗೆ ಗಳ ಘಟಕ ಸ್ಥಾಪಿಸಲು ರಾಜ್ಯ ಸರ್ಕಾರ ₹15 ಕೋಟಿ ಮೀಸಲಿಡಲಿದೆ. ಪಶ್ಚಿಮ ಮಹಾನಗರ ಪಾಲಿಕೆ ಮೂಲಕ ಹಣಕಾಸು ಒದಗಿಸಲು, ಸಿಎಸ್ಆರ್ ನಿಧಿಯಡಿ ಕ್ಯಾಥ್ ಲ್ಯಾಬ್ ಸೌಲಭ್ಯ ಸ್ಥಾಪಿಸಲು ನಾವು ಬದ್ಧರಾಗಿದ್ದೇವೆ’ ಎಂದು ಹೇಳಿದರು.

ಬಿಎಂಸಿಆರ್ಐ ಹೊಸ ಕ್ಯಾಂಪಸ್ ಅನ್ನು ಬೆಂಗಳೂರಿನ ಪಶ್ಚಿಮದಲ್ಲಿ ಸ್ಥಾಪಿಸಲು ಕನಿಷ್ಠ ಐದು ಎಕರೆ ಸರ್ಕಾರಿ ಭೂಮಿಯನ್ನು ಗುರುತಿಸುವಂತೆ ಪಶ್ಚಿಮ ಮಹಾನಗರ ಪಾಲಿಕೆ ಆಯುಕ್ತರಿಗೆ ಸಚಿವರು ಸೂಚನೆ ನೀಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-4-1566012965

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.