ಬೆಂಗಳೂರು: ಉದ್ಯಮಿಯೊಬ್ಬರ ಮೇಲೆ ದುಷ್ಕರ್ಮಿ ಗುಂಡು ಹಾರಿಸಿ ಪರಾರಿಯಾಗಿದ್ದು, ಆತನ ಪತ್ತೆಗೆ ಬಸವನಗುಡಿ ಠಾಣೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಘಟನೆಯಲ್ಲಿ ಉದ್ಯಮಿ ರಾಜಗೋಪಾಲ್ ಅವರು ಗಾಯಗೊಂಡಿದ್ದಾರೆ. ರಾಜಗೋಪಾಲ್ ಅವರು ಬಸವನಗುಡಿಯ ನರ್ತಕಿ ಹಾಗೂ ಕಾರ್ಗಿಲ್ ಬಾರ್ ಆ್ಯಂಡ್ ರೆಸ್ಟೊರೆಂಟ್ ಮಾಲೀಕ.

ಡಿ.10ರಂದು ರಾತ್ರಿ 8.30ರ ಸುಮಾರಿಗೆ ಬಸವನಗುಡಿಯ ಕೃಷ್ಣರಾವ್ ಪಾರ್ಕ್ ಬಳಿ ಗುಂಡಿನ ದಾಳಿ ನಡೆದಿದೆ ಎಂದು ದೂರು ನೀಡಲಾಗಿದೆ.

‘ಗುಂಡಿನ ದಾಳಿಯಿಂದಾಗಿ ಕತ್ತಿನ ಭಾಗಕ್ಕೆ ಗಾಯವಾಗಿದೆ. ಜಯನಗರದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಕೃತ್ಯ ನಡೆದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆಹಾಕಲಾಗಿದೆ. ಗಾಯಾಳು ಹೇಳಿಕೆ ಸಹ ದಾಖಲು ಮಾಡಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ರಾಜಗೋಪಾಲ್ ಅವರು ತಮಗೆ ಯಾರ ಮೇಲೆಯೂ ಅನುಮಾನ ಇಲ್ಲ. ಯಾವುದೇ ಬೆದರಿಕೆ ಕರೆಗಳು ಬಂದಿರಲಿಲ್ಲ. ಯಾವ ಕಾರಣಕ್ಕೆ ದುಷ್ಕರ್ಮಿ ಗುಂಡು ಹಾರಿಸಿದ್ದಾನೆ ಎಂದು ತಿಳಿದಿಲ್ಲ ಎಂಬುದಾಗಿ ವಿಚಾರಣೆ ವೇಳೆ ರಾಜಗೋಪಾಲ್ ತಿಳಿಸಿದ್ದಾರೆ’ ಎಂದು ಪೊಲೀಸರು ಹೇಳಿದರು.

‘ಪ್ರಕರಣದ ತನಿಖೆಯನ್ನು ತೀವ್ರಗೊಳಿಸಲಾಗಿದೆ. ಕೃತ್ಯಕ್ಕೆ ಯಾವ ಮಾದರಿಯ ಗನ್ ಬಳಸಲಾಗಿತ್ತು ಎಂಬುದನ್ನು ಪರಿಶೀಲಿಸಲಾಗುತ್ತಿದೆ. ಕೃತ್ಯ ನಡೆದ ಸ್ಥಳದ ಸುತ್ತಮುತ್ತ ಅಳವಡಿಸಿರುವ ಸಿ.ಸಿ.ಟಿ.ವಿ ಕ್ಯಾಮೆರಾಗಳಲ್ಲಿ ಸೆರೆಯಾದ ದೃಶ್ಯಾವಳಿ ಪರಿಶೀಲನೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.