ಬೆಂಗಳೂರು: ಮಲ್ಲೇಶ್ವರಂ ನಾಗರಿಕ ನಿರ್ವಹಣಾ ಸಮಿತಿಯಿಂದ ಆಗಸ್ಟ್ 2ರಂದು ಸದಾಶಿವನಗರದಲ್ಲಿರುವ ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್ಸಿ) ಜೆ.ಎನ್. ಟಾಟಾ ಸಭಾಂಗಣದಲ್ಲಿ ಆಯೋಜಿಸಿರುವ ಗುರುವಂದನಾ ಕಾರ್ಯಕ್ರಮದಲ್ಲಿ ‘ಆರೋಹಣ’ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಅಧ್ಯಕ್ಷ ವಲ್ಲಭ್ ಕೆ., ‘ನಿವೃತ್ತ ಪೊಲೀಸ್ ಅಧಿಕಾರಿ ಬಿ.ಕೆ. ಶಿವರಾಂ, ಹಿಮಾಂಶು ಜ್ಯೋತಿ ಕಲಾಪೀಠ ಶಾಲೆಯ ವ್ಯವಸ್ಥಾಪಕ ನಿರ್ದೇಶಿಕಿ ಚಿತ್ರಾ ಎ. ರಾವ್, ಕೆಎಸ್ಐಐಡಿಸಿ ಅಧ್ಯಕ್ಷ ದಾಸಪ್ಪ, ಗಾಯಕಿ ಆರ್.ಎ. ರಮಾಮಣಿ, ಧಾರ್ಮಿಕ ಪ್ರವಚನಕಾರ ಪಾವಗಡ ಪ್ರಕಾಶರಾವ್ ಅವರಿಗೆ ಜೀವಮಾನ ಸಾಧನೆಗೆ ‘ಆರೋಹಣ’ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ’ ಎಂದು ಮಾಹಿತಿ ನೀಡಿದರು.

‘ವಿವಿಧ ಕ್ಷೇತ್ರಗಳಲ್ಲಿ ಮಹತ್ವದ ಕೊಡುಗೆ ನೀಡಿದ ವ್ಯಕ್ತಿಗಳನ್ನು ಈ ಕಾರ್ಯಕ್ರಮದಲ್ಲಿ ಗೌರವಿಸಲಾಗುವುದು. ಮಲ್ಲೇಶ್ವರದ ಸುತ್ತ ಮುತ್ತಲು ಇರುವ 50ಕ್ಕೂ ಹೆಚ್ಚು ಶಾಲಾ ಶಿಕ್ಷಕರ ಕೆಲಸವನ್ನು ಸ್ಮರಿಸಿ ಅವರನ್ನೂ ಸನ್ಮಾನಿಸಲಾಗುವುದು’ ಎಂದರು.

ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ, ಯದುಗಿರಿ ಯತಿರಾಜ ಮಠದ ನಾರಾಯಣ ರಾಮಾನುಜ ಜೀಯರ್ ಸ್ವಾಮೀಜಿ, ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಕರಿವೃಷಭ ದೇಶಿಕೇಂದ್ರ ಶಿವಯೋಗಿಶ್ವರ ಸ್ವಾಮೀಜಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಲಿದ್ದಾರೆ. ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ, ರಾಜ್ಯಸಭಾ ಸದಸ್ಯ ಜಿ.ಸಿ. ಚಂದ್ರಶೇಖರ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.