ಬೆಂಗಳೂರು: ಬಿಸಿಲು, ಮಳೆ ಎನ್ನದೇ ಹಗಲಿರುಳು ದುಡಿಯುವ ರೈತರ ಉತ್ಪನ್ನಗಳಿಗೆ ಉತ್ತಮ ಬೆಲೆ ಸಿಗುತ್ತಿಲ್ಲ. ರಾಜ್ಯ ಸರ್ಕಾರ ಈ ಬಗ್ಗೆ ಗಮನ ಹರಿಸಿ, ವೈಜ್ಞಾನಿಕವಾದ ಬೆಲೆ ನೀಡಬೇಕು’ ಎಂದು ರಾಜ್ಯಸಭಾ ಸದಸ್ಯ ಎಚ್.ಡಿ. ದೇವೇಗೌಡ ಒತ್ತಾಯಿಸಿದರು.

ತೋಟಗಾರಿಕೆ ಇಲಾಖೆ ಹಾಗೂ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ಸಹಯೋಗದಲ್ಲಿ ಕಬ್ಬನ್ ಉದ್ಯಾನದಲ್ಲಿ ನಡೆಯುತ್ತಿರುವ ಮಾವು-ಹಲಸು ಮೇಳಕ್ಕೆ ಸೋಮವಾರ ಭೇಟಿ ನೀಡಿ, ವಿವಿಧ ಮಳಿಗೆಗಳನ್ನು ವೀಕ್ಷಿಸಿದರು. ಅಲ್ಲಿನ ರೈತರೊಂದಿಗೆ ಮಾತುಕತೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

‘ರೈತನ ಕಷ್ಟಕ್ಕೆ ತಕ್ಕ ಪ್ರತಿಫಲ ಸಿಗಬೇಕು. ರೈತರಿಗೆ ಅನುಕೂಲವಾಗುವಂತೆ ಅಗತ್ಯ ಪ್ರಮಾಣದಲ್ಲಿ ಶೈತ್ಯಾಗಾರಗಳನ್ನು ಸ್ಥಾಪಿಸಬೇಕು. ನನ್ನ ಶಕ್ತಿ ಇರುವವರೆಗೂ ರೈತರ ಪರವಾಗಿ ಹೋರಾಟ ಮಾಡುತ್ತೇನೆ’ ಎಂದು ತಿಳಿಸಿದರು.

‘ರೈತರಿಂದ ನೇರವಾಗಿ ಗುಣಮಟ್ಟದ ಕಾರ್ಬೈಡ್ ಮುಕ್ತ ಹಣ್ಣುಗಳನ್ನು ಖರೀದಿಸಲು ಮೇಳದಲ್ಲಿ ಅವಕಾಶ ನೀಡಲಾಗಿದೆ. ಮೇಳವು ಮೇ 17 ರವರೆಗೆ ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡಿ, ರೈತರನ್ನು ಪ್ರೋತ್ಸಾಹಿಸಬೇಕು’ ಎಂದು ನಿಗಮದ ಅಧ್ಯಕ್ಷ ಡಾ.ಬಿ.ಸಿ. ಮುದ್ದುಗಂಗಾಧರ್ ತಿಳಿಸಿದರು.

ನಿಗಮದ ವ್ಯವಸ್ಥಾಪಕ ನಿರ್ದೇಶಕ ವೇದಮೂರ್ತಿ ಮಾತನಾಡಿ, ‘ರೈತರಿಗೆ ನೇರವಾಗಿ ಮಾರುಕಟ್ಟೆ ಸೌಲಭ್ಯ ಒದಗಿಸಿ ಗ್ರಾಹಕರಿಗೆ ಕಾರ್ಬೈಡ್ ಮುಕ್ತ, ರುಚಿಕರ ಹಣ್ಣುಗಳನ್ನು ಕಡಿಮೆ ದರದಲ್ಲಿ ಲಭ್ಯವಾಗುವಂತೆ ಮಾಡುವುದು ಮೇಳದ ಉದ್ದೇಶವಾಗಿದೆ. ಕಳೆದ ನಾಲ್ಕು ದಿನಗಳಲ್ಲಿ ಅಂದಾಜು 8 ರಿಂದ 10 ಟನ್ನಷ್ಟು ಮಾವು ಮಾರಾಟವಾಗಿದೆ. ಮೇ 28 ರಿಂದ ಲಾಲ್ಬಾಗ್ನಲ್ಲಿಯೂ ಮಾವು–ಹಲಸಿನ ಮೇಳ ಆಯೋಜಿಸ ಲಾಗುವುದು’ ಎಂದರು.

ಈ ಸಂದರ್ಭದಲ್ಲಿ ಮಾಜಿ ಶಾಸಕಎಚ್.ಎಂ. ರಮೇಶ್ ಗೌಡ, ತೋಟಗಾರಿಕೆಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-4-1324644736

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.