ಬೆಂಗಳೂರು: ‘ತುರ್ತು ಸಂದರ್ಭದಲ್ಲಿ ಜನರಿಗೆ ಮಾಹಿತಿ ನೀಡಿ ವೇಗದ ಸ್ಪಂದನ ನೀಡಲು ‘ಆರೋಗ್ಯ ತುರ್ತು ಕಾರ್ಯಾಚರಣೆ ಕೇಂದ್ರ’ ಸಹಕಾರಿಯಾಗಲಿದೆ’ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ನಗರದ ಆರೋಗ್ಯ ಸೌಧದಲ್ಲಿ ‘ಆರೋಗ್ಯ ತುರ್ತು ಕಾರ್ಯಾಚರಣೆ ಕೇಂದ್ರ’ಕ್ಕೆ ಗುರುವಾರ ಚಾಲನೆ ನೀಡಿ ಅವರು ಮಾತನಾಡಿದರು.

‘ಆರೋಗ್ಯ ವಲಯದ ತುರ್ತು ಸಂದರ್ಭಗಳಲ್ಲಿ ಸಮಯೋಚಿತ ನಿರ್ಧಾರ ಕೈಗೊಳ್ಳುವ ಜೊತೆಗೆ ಸಂಪನ್ಮೂಲಗಳ ಸರಿಯಾದ ಬಳಕೆ ಮಾಡಿಕೊಳ್ಳುವುದು ಮುಖ್ಯವಾಗುತ್ತದೆ. ಇದರೊಟ್ಟಿಗೆ ಜನರಿಗೆ ಸರಿಯಾದ ಮಾಹಿತಿ ತಲುಪಿಸಿ, ಆತಂಕಕ್ಕೆ ಒಳಗಾಗದಂತೆ ಎಚ್ಚರಿಸಲು ಕೇಂದ್ರೀಯ ನಿಯಂತ್ರಣ ಘಟಕವಾಗಿ ಇದು ಕೆಲಸ ನಿರ್ವಹಿಸಲಿದೆ’ ಎಂದು ಹೇಳಿದರು.

‘ತುರ್ತು ಸಂದರ್ಭಗಳಲ್ಲಿ ಕಂದಾಯ, ವಿಪತ್ತು ನಿರ್ವಹಣಾ ಪ್ರಾಧಿಕಾರ, ಪೊಲೀಸ್, ಅಗ್ನಿಶಾಮಕ ಸೇವೆ ಮುಂತಾದವುಗಳ ಸಮನ್ವಯದಿಂದ ಆರೋಗ್ಯ ಇಲಾಖೆಯು ಪರಿಸ್ಥಿತಿ ನಿರ್ವಹಿಸಲು ಇದು ಸಹಕಾರಿ ಆಗಲಿದೆ. 24/7 ಕಾರ್ಯನಿರ್ವಹಿಸುವ ಈ ಕೇಂದ್ರ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಸೇವೆಗಳು ಇವುಗಳೊಂದಿಗೆ ತಕ್ಷಣ ಸಂಪರ್ಕ ಸಾಧಿಸಿ ಮಾಹಿತಿ ವಿನಿಮಯ ಮತ್ತು ಸೂಕ್ತ ನಿರ್ದೇಶನ ನೀಡಲು ನೆರವಾಗಲಿದೆ’ ಎಂದರು.

‘ಕೋವಿಡ್ ಸಂದರ್ಭದಲ್ಲಿ ಉಂಟಾದ ಸಮನ್ವಯದ ಕೊರತೆ ನೀಗಿಸಲು ಈ ವ್ಯವಸ್ಥೆ ಅತ್ಯವಶ್ಯಕ. ಸಾಂಕ್ರಾಮಿಕ ರೋಗಗಳು, ಬೆಂಕಿ ಅವಘಡ, ಪ್ರಕೃತಿ ವಿಕೋಪಗಳನ್ನು ಸಮರ್ಪಕವಾಗಿ ನಿರ್ವಹಿಸಲು ವಿಶ್ವ ಆರೋಗ್ಯ ಸಂಸ್ಥೆ ಮಾರ್ಗದರ್ಶನದಂತೆ ಪ್ರತಿ ರಾಜ್ಯದಲ್ಲೂ ಕಮಾಂಡ್ ಕಂಟ್ರೋಲ್ ರೂಂ ಮಾಡಲಾಗುತ್ತಿದೆ. ಪ್ರಧಾನಮಂತ್ರಿ ಆಯುಷ್ಮಾನ್ ಭಾರತ ಆರೋಗ್ಯ ಮೂಲಸೌಕರ್ಯ ಮಿಷನ್ ಅಡಿಯಲ್ಲಿ ನೆರವು ನೀಡಲಾಗಿದೆ’ ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತ್ವಿಕ್ ರಂಜನಂ ಪಾಂಡೆ, ಆಯುಕ್ತ ಗುರುದತ್ತ ಹೆಗಡೆ, ರಾಷ್ಟ್ರೀಯ ಆರೋಗ್ಯ ಮಿಷನ್ ನಿರ್ದೇಶಕ ಅವಿನಾಶ್ ಮೆನನ್, ಇಲಾಖೆ ನಿರ್ದೇಶಕಿ ಡಾ.ರಜನಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-4-1213024427

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.