ಬೆಂಗಳೂರು: ‘ಬದಲಾದ ಜೀವನಶೈಲಿಯಿಂದಾಗಿ ಹೃದಯಾಘಾತ, ಕ್ಯಾನ್ಸರ್, ಮೂತ್ರಪಿಂಡ ವೈಫಲ್ಯದಂತಹ ಸಾಂಕ್ರಾಮಿಕವಲ್ಲದ ರೋಗಗಳ ಪ್ರಕರಣಗಳು ಹೆಚ್ಚಳವಾಗುತ್ತಿವೆ’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕಳವಳ ವ್ಯಕ್ತಪಡಿಸಿದರು. ಮಿಷನ್ ರಸ್ತೆಯಲ್ಲಿ ನಿರ್ಮಾಣವಾಗಿರುವ ಎನ್ಯು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಉದ್ಘಾಟಿಸಿ, ಮಾತನಾಡಿದರು.

‘ಆರೋಗ್ಯ ಕೆಟ್ಟ ನಂತರ ಚಿಕಿತ್ಸೆಯ ಕಡೆಗೆ ಗಮನ ನೀಡುವ ಬದಲು, ಅನಾರೋಗ್ಯ ಸಮಸ್ಯೆಗಳು ಬರದಂತೆ ಎಚ್ಚರ ವಹಿಸ ಬೇಕು. ಹಿಂದೆ ಸಾಂಕ್ರಾಮಿಕ ರೋಗಗಳು ಹೆಚ್ಚಾಗಿ ಕಾಣಿಸಿಕೊಳ್ಳು ತ್ತಿದ್ದವು. ವೈದ್ಯಕೀಯ ಕ್ಷೇತ್ರದ ಪ್ರಗತಿಯಿಂದ ಆ ರೋಗಗಳನ್ನು ಗುಣಪಡಿಸಲು ಸಾಧ್ಯವಾಗಿದೆ. ಸಾಂಕ್ರಾಮಿಕವಲ್ಲದ ರೋಗಗಳಿಗೆ ಕಡಿವಾಣ ಹಾಕಲು ಆರೋಗ್ಯಕರ ಜೀವನಶೈಲಿ ಅಳವಡಿಸಿಕೊಳ್ಳುವುದು ಮುಖ್ಯವಾಗುತ್ತದೆ’ ಎಂದರು.

‘ವೈದ್ಯಕೀಯ ಕ್ಷೇತ್ರ ವೇಗವಾಗಿ ಬೆಳವಣಿಗೆ ಹೊಂದುತ್ತಿದೆ. ಹೊಸ ತಂತ್ರಜ್ಞಾನಗಳ ಅಳವಡಿಕೆಯ ಜತೆಗೆ, ಚಿಕಿತ್ಸೆಯಲ್ಲಿಯೂ ದೊಡ್ಡ ಮಟ್ಟದ ಕ್ರಾಂತಿಯಾಗಿದೆ’ ಎಂದರು.

ಸಂಸದರಾದ ಡಾ.ಸಿ.ಎನ್. ಮಂಜುನಾಥ್, ಪಿ.ಸಿ.ಮೋಹನ್, ಚಿತ್ರನಟ ರಮೇಶ್ ಅರವಿಂದ್, ಎನ್ಯು ಆಸ್ಪತ್ರೆಯ ಅಧ್ಯಕ್ಷ ಡಾ. ವೆಂಕಟೇಶ್ ಕೃಷ್ಣಮೂರ್ತಿ, ವ್ಯವಸ್ಥಾಪಕ ನಿರ್ದೇಶಕ ಡಾ. ಪ್ರಸನ್ನ ವೆಂಕಟೇಶ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.