ಬೆಂಗಳೂರು: ಹೆಬ್ಬಾಳ ವಿಧಾನ ಸಭಾ ಕ್ಷೇತ್ರದಲ್ಲಿ ನವೀಕರಣಗೊಳಿಸಿರುವ ಭೂಪಸಂದ್ರದ ಗೆದ್ದಲಹಳ್ಳಿ, ಕೆಇಬಿ, ಎಸಿಎಸ್ ಬಡಾವಣೆ, ಪೋಸ್ಟಲ್ ಕಾಲೊನಿ ಹಾಗೂ ನಾಗಶೆಟ್ಟಿಹಳ್ಳಿಯ ಎನ್ಜಿಇಎಫ್ ಬಡಾವಣೆಯ ಉದ್ಯಾನಗಳನ್ನು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಮಂಗಳವಾರ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ‘ರಾಜ್ಯ ಸರ್ಕಾರದ ₹30 ಕೋಟಿ ವಿಶೇಷಅನುದಾನದ ಅಡಿಯಲ್ಲಿ ಈ ಉದ್ಯಾನಗಳನ್ನು ನವೀಕರಣ ಮಾಡಲಾಗುತ್ತಿದೆ. ಇದೀಗ ಐದು ಉದ್ಯಾನಗಳನ್ನು ಅಭಿವೃದ್ಧಿಪಡಿಸಿ, ಉದ್ಘಾಟಿಸಲಾಗಿದೆ. ಇನ್ನುಳಿದಉದ್ಯಾನಗಳ ನವೀಕರಣ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಹಂತಹಂತವಾಗಿ ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ನೀಡಲಾಗುವುದು’ ಎಂದು ಭರವಸೆ ನೀಡಿದರು.

‘ಉದ್ಯಾನಗಳಲ್ಲಿ ವಾಯು ವಿಹಾರಿಗಳಿಗೆ ಅನುಕೂಲವಾಗುವಂತೆ ಪಾದಚಾರಿ ಮಾರ್ಗ, ವಿದ್ಯುತ್ ದೀಪಗಳ ಸೌಲಭ್ಯ, ಕುಡಿಯುವ ನೀರಿನ ವ್ಯವಸ್ಥೆ, ವ್ಯಾಯಾಮ ಮಾಡುವ ಸಲಕರಣೆಗಳನ್ನು ಅಳವಡಿಸಲಾಗಿದೆ. ಇದಲ್ಲದೇ, ಸದಾ ಹಸಿರಿನಿಂದ ಕಂಗೊಳಿಸುವಂತೆ ಮಾಡಲು ನಿರಂತರವಾಗಿ ಗಿಡ-ಮರಗಳಿಗೆ ನೀರು ಪೂರೈಕೆ ವ್ಯವಸ್ಥೆ ಇದ್ದು, ನೀರಿನ ಕೊರತೆ ಎದುರಾದರೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ’ ಎಂದರು.

‘ಮೊದಲ ಹಂತದಲ್ಲಿ 50 ಉದ್ಯಾನಗಳ ನವೀಕರಣ ಕಾಮಗಾರಿ ಕೈಗೊಂಡಿದ್ದು, ಇನ್ನೊಂದು ತಿಂಗಳಲ್ಲಿ ಪೂರ್ಣವಾಗಲಿದೆ. ಎರಡನೇ ಹಂತದಲ್ಲಿ ಉಳಿದ ಉದ್ಯಾನಗಳ ಅಭಿವೃದ್ಧಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುವುದು’ ಎಂದು ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-4-2097068258

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.