ಬೆಂಗಳೂರು: ವರದಕ್ಷಿಣೆ ಕಿರುಕುಳ ಹಾಗೂ ಕೌಟುಂಬಿಕ ಕಲಹದಿಂದ ಬೇಸತ್ತು ಮಹಿಳೆಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೆಣ್ಣೂರು ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಹೊರಮಾವಿನಲ್ಲಿ ನೆಲಸಿದ್ದ ಸುಪ್ರೀತಾ(28) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ.

ಸುಪ್ರೀತಾ ಅವರ ಪತಿ ಕಿರಣ್ ಕುಮಾರ್ ಅವರು ತಲೆಮರೆಸಿಕೊಂಡಿದ್ದಾರೆ. ಅವರ ಪತ್ತೆಗೆ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.

‘ಚಿಕ್ಕಬಳ್ಳಾಪುರದ ಸುಪ್ರೀತಾ ಅವರು ಐದು ವರ್ಷಗಳ ಹಿಂದೆ ಕಿರಣ್ ಕುಮಾರ್ ಅವರನ್ನು ಮದುವೆ ಆಗಿದ್ದರು. ಕಿರಣ್ ಅವರು ಖಾಸಗಿ ಸಂಸ್ಥೆಯೊಂದರಲ್ಲಿ ಮಾರಾಟ ಪ್ರತಿನಿಧಿಯಾಗಿ ಕೆಲಸ ಮಾಡುತ್ತಿದ್ದರು. ಆರಂಭದಲ್ಲಿ ದಂಪತಿ ಉತ್ತಮವಾಗಿ ಜೀವನ ಸಾಗಿಸುತ್ತಿದ್ದರು. ಆದರೆ, ಇತ್ತೀಚೆಗೆ ಸುಪ್ರೀತಾಗೆ ಆರೋಪಿ ಕಿರಣ್ ಕುಮಾರ್ ಮತ್ತು ಆತನ ಕುಟುಂಬದವರು ವರದಕ್ಷಿಣೆ ಕಿರುಕುಳ ನೀಡಲು ಆರಂಭಿಸಿದ್ದರು. ಅದರಿಂದ ಬೇಸತ್ತಿದ್ದ ಸುಪ್ರೀತಾ ಅವರು ಸೋಮವಾರ ಬೆಳಿಗ್ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂಬ ದೂರು ಆಧರಿಸಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

‘ಹೊಸ ಬೈಕ್ ಖರೀದಿಸಲು ಹಣ ತರುವಂತೆ ಕಿರಣ್ ನಿರಂತರವಾಗಿ ಪೀಡಿಸುತ್ತಿದ್ದರು. ಸುಪ್ರೀತಾ ತವರು ಮನೆಗೆ ಹೋಗಿದ್ದರು. ಅಲ್ಲಿಗೂ ಹೋಗಿ ಸುಪ್ರೀತಾ ಅವರಿಗೆ ಆರೋಪಿ ದೈಹಿಕ ಮತ್ತು ಮಾನಸಿಕ ಹಿಂಸೆ ನೀಡುತ್ತಿದ್ದರು. ವರದಕ್ಷಿಣೆ ಆಸೆಗಾಗಿ ಮಗಳನ್ನು ಆತನೇ ಕೊಲೆ ಮಾಡಿ ಈಗ ನಾಟಕವಾಡುತ್ತಿದ್ದಾನೆ’ ಎಂದು ಸುಪ್ರೀತಾ ಅವರ ಕುಟುಂಬಸ್ಥರು ದೂರು ನೀಡಿದ್ದಾರೆ.

ಹೆಣ್ಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಷೇರು ಮಾರುಕಟ್ಟೆಯಲ್ಲಿ ನಷ್ಟ: ವ್ಯಕ್ತಿ ಆತ್ಮಹತ್ಯೆ

ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ ಹಣ ಕಳೆದುಕೊಂಡಿದ್ದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಬ್ಬಾಳದಲ್ಲಿ ನಡೆದಿದೆ.

ವೆಂಕಟೇಶ್ (50) ಆತ್ಮಹತ್ಯೆ ಮಾಡಿಕೊಂಡವರು.

ವೆಂಕಟೇಶ್ ಅವರು ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿ ನಷ್ಟಕ್ಕೆ ಒಳಗಾಗಿದ್ದರು. ಬೇರೆ ಬೇರೆ ಕಡೆಗಳಲ್ಲಿ ಸಾಲ ಮಾಡಿದ್ದರು. ಸಾಲ ನೀಡಿದವರ ಒತ್ತಡ ಹೆಚ್ಚಾಗಿತ್ತು. ಜತೆಗೆ, ವೆಂಕಟೇಶ್ ಅವರು ತೀವ್ರ ಅನಾರೋಗ್ಯದಿಂದಲೂ ಬಳಲುತ್ತಿದ್ದರು. ವೆಂಕಟೇಶ್ ಅವರು ಮರಣ ಪತ್ರ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೂಲಗಳು ಹೇಳಿವೆ.

‘ಹೆಬ್ಬಾಳದ ರೈಲ್ವೆ ಹಳಿ ಬಳಿ ಅವರ ಬ್ಯಾಗ್ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಬೈಯಪ್ಪನಹಳ್ಳಿ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ’ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.