ಬೆಂಗಳೂರು: ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಹಕ್ಕಿ ಜ್ವರ ಪ್ರಕರಣ ಪತ್ತೆಯಾದ ಕಾರಣ, 22 ಗ್ರಾಮಗಳಲ್ಲಿ ಕೈಗೊಂಡಿದ್ದ ಹತ್ತು ದಿನಗಳ ನಿಗಾ ಅವಧಿ ಯಶಸ್ವಿಯಾಗಿ ಪೂರ್ಣಗೊಂಡಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಈ ಕೇಂದ್ರದ ಕೋಳಿಯಲ್ಲಿ ಎಚ್ 5ಎನ್1 ಸೋಂಕು ಏ.14ರಂದು ದೃಢಪಟ್ಟಿತ್ತು. ಬಳಿಕ ರಾಜ್ಯ ಮತ್ತು ಜಿಲ್ಲಾ ಕ್ಷಿಪ್ರ ಕಾರ್ಯಪಡೆ ತಂಡ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ತಂಡವು ಸ್ಥಳಕ್ಕೆ ಭೇಟಿ ನೀಡಿ, ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿತ್ತು.

‘ಸೋಂಕಿತ ಪ್ರದೇಶದ 10 ಕಿ.ಮೀ. ವ್ಯಾಪ್ತಿಯೊಳಗಿನ 22 ಗ್ರಾಮಗಳಿಂದ ಒಟ್ಟು 28,172 ಜನರನ್ನು 10 ದಿನಗಳ ನಿಗಾ ವ್ಯವಸ್ಥೆಗೆ ಒಳಪಡಿಸಲಾಗಿತ್ತು. ಅನೇಕ ಸುತ್ತಿನ ನಿಗಾ ಕೈಗೊಂಡ ಬಳಿಕ, ನಿಯಮಾನುಸಾರ ಸ್ವಚ್ಛತಾ ಕ್ರಮಗಳನ್ನು ಪೂರ್ಣಗೊಳಿಸಲಾಗಿದೆ’ ಎಂದು ಇಲಾಖೆ ಹೇಳಿದೆ.

‘ನಿಗಾ ಅವಧಿಯಲ್ಲಿ ಮೊದಲ ಐದು ದಿನಗಳು 10 ಸಿಬ್ಬಂದಿಯ ಗಂಟಲ ದ್ರವದ ಮಾದರಿಯನ್ನು ಸಂಗ್ರಹಿಸಿ, ರಾಷ್ಟ್ರೀಯ ವೈರಾಣು ಸಂಸ್ಥೆಯ (ಎನ್ಐವಿ) ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಅವರ ಮಾದರಿಯಲ್ಲಿ ಎಚ್5ಎನ್1 ಸೋಂಕು ಕಾಣಿಸಿಕೊಂಡಿಲ್ಲ. 10ನೇ ದಿನದಂದು ಮತ್ತೊಮ್ಮೆ ಗಂಟಲ ದ್ರವದ ಮಾದರಿಯನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಆ ಪರೀಕ್ಷೆಗಳ ವರದಿ ಬರಬೇಕಿದೆ’ ಎಂದು ತಿಳಿಸಿದೆ.

‘ಸೋಂಕಿತ ಮತ್ತು ನಿಗಾ ವಲಯಗಳಲ್ಲಿ ಯಾವುದೇ ಮಾನವ ಎಚ್5ಎನ್1 ಪ್ರಕರಣ ಪತ್ತೆಯಾಗಿಲ್ಲ. ಮುಂಜಾಗ್ರತಾ ಕ್ರಮವಾಗಿ ಮುಂದಿನ 90 ದಿನಗಳ ಕಾಲ ಈ ಭಾಗದಲ್ಲಿ ಕೋಳಿ ಸಾಕಾಣಿಕೆ ಚಟುವಟಿಕೆಗಳನ್ನು ಸ್ಥಗಿತಗೊಳಿಸಲಾಗಿದೆ. ಸಾರ್ವಜನಿಕರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಆದರೆ, ಹಕ್ಕಿ ಜ್ವರದ ಬಗ್ಗೆ ಇಲಾಖೆ ನೀಡಿರುವ ಮುನ್ನೆಚ್ಚರಿಕೆಗಳನ್ನು ಪಾಲಿಸಬೇಕು’ ಎಂದು ಹೇಳಿದೆ.

ಹಕ್ಕಿ ಜ್ವರದ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಆದರೆ, ಕೋಳಿ ಮಾಂಸ ಮತ್ತು ಮೊಟ್ಟೆಯನ್ನು ಚೆನ್ನಾಗಿ ಬೇಯಿಸಿ ಸೇವಿಸಬೇಕು
ದಿನೇಶ್ ಗುಂಡೂರಾವ್, ಆರೋಗ್ಯ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.