ಬೆಂಗಳೂರು: ಶಸ್ತ್ರಚಿಕಿತ್ಸೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯ ಚಿನ್ನಾಭರಣ ಕಳವು ಮಾಡಿದ್ದ ಆಸ್ಪತ್ರೆಯೊಂದರ ಮಹಿಳಾ ಸಿಬ್ಬಂದಿಯನ್ನು ಹೆಣ್ಣೂರು ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹೆಣ್ಣೂರು–ಬಾಗಲೂರು ಮುಖ್ಯರಸ್ತೆಯಲ್ಲಿರುವ ಆಸ್ಪತ್ರೆಯ 36 ವರ್ಷದ ಮಹಿಳಾ ಸಿಬ್ಬಂದಿಯನ್ನು ವಶಕ್ಕೆ ಪಡೆಯಲಾಗಿದೆ. ಮೇ 1ರಂದು ಆಸ್ಪತ್ರೆಗೆ ದಾಖಲಾಗಿದ್ದ ಸ್ವಪ್ನಾ ಎಂಬವರ ₹9.68 ಲಕ್ಷ ಮೌಲ್ಯದ ಚಿನ್ನಾಭರಣ ಕಳವಾಗಿತ್ತು. ಸ್ವಪ್ನಾ ಅವರ ಪತಿ ಶ್ರೀನಿವಾಸ್ ನೀಡಿದ ದೂರಿನ ಮೇಲೆ ಸಿಬ್ಬಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.

ಮೇ 2ರ ಬೆಳಿಗ್ಗೆ ಶಸ್ತ್ರಚಿಕಿತ್ಸಾ ಕೊಠಡಿಗೆ ಕರೆದೊಯ್ಯುವ ಮೊದಲು ನರ್ಸಿಂಗ್ ಸಿಬ್ಬಂದಿ ಎಲ್ಲಾ ಆಭರಣಗಳನ್ನು ತೆಗೆಯುವಂತೆ ಸೂಚಿಸಿದ್ದರು. ಬಳಿಕ, ಮಹಿಳೆ 65 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರ, 9 ಗ್ರಾಂ ತೂಕದ ಕಿವಿಯೋಲೆಗಳು ಹಾಗೂ 10 ಗ್ರಾಂ ತೂಕದ ಬೆಳ್ಳಿ ಕಾಲುಗೆಜ್ಜೆಗಳನ್ನು ಹ್ಯಾಂಡ್ಬ್ಯಾಗ್ನಲ್ಲಿ ಇಟ್ಟು ವಾರ್ಡ್ನ ಕಪಾಟಿನೊಳಗೆ ಇರಿಸಿದ್ದರು. ಶಸ್ತ್ರಚಿಕಿತ್ಸೆ ಬಳಿಕ ಕಪಾಟು ಪರಿಶೀಲಿಸಿದಾಗ ಆಭರಣಗಳು ಇರಲಿಲ್ಲ. ಬಳಿಕ ಆಸ್ಪತ್ರೆಯ ಸಿಬ್ಬಂದಿಯನ್ನು ವಿಚಾರಿಸಿದಾಗ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

‘ಆಸ್ಪತ್ರೆಯ ಸಿ.ಸಿ.ಟಿ.ವಿ ಕ್ಯಾಮೆರಾದ ದೃಶ್ಯ ಗಮನಿಸಿ, ಇತ್ತೀಚೆಗೆ ಆಸ್ಪತ್ರೆಗೆ ಸೇರಿದ್ದ ಮಹಿಳಾ ಸಿಬ್ಬಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ವಿಚಾರಣೆ ವೇಳೆ ಆಭರಣ ತೆಗೆದುಕೊಂಡಿರುವುದಾಗಿ ತಪ್ಪೊಪ್ಪಿಕೊಂಡಿ ದ್ದಾರೆ. ಆಭರಣವನ್ನು ಬೇರೆಡೆ ಅಡಮಾನ ಇಟ್ಟಿರುವುದಾಗಿ ಹೇಳಿಕೆ ನೀಡಿದ್ದಾರೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-4-1661135136

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.