ಬೆಂಗಳೂರು: ಮನೆಯ ಬಾಗಿಲ ಬೀಗ ಮುರಿದು ಕೊಠಡಿಯಲ್ಲಿಟ್ಟಿದ್ದ ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕ ಸೇರಿ ಐವರನ್ನು ಬಸವೇಶ್ವರ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ನಂದೀಶ್, ಸೋಮಶೇಖರ್, ಮಧುಗೌಡ, ಭೀಮಾ ಮತ್ತು ಬಾಲಕನನ್ನು ಬಂಧಿಸಲಾಗಿದೆ. ಆರೋಪಿಗಳಿಂದ 115 ಗ್ರಾಂ ಚಿನ್ನಾಭರಣ, ಕೃತ್ಯಕ್ಕೆ ಬಳಸಿದ್ದ ಆಟೊ ಮತ್ತು ₹13,400 ನಗದು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಠಾಣಾ ವ್ಯಾಪ್ತಿಯ 1ನೇ ಹಂತದ ಬಿಇಎಂಎಲ್ ಲೇಔಟ್ನಲ್ಲಿ ವಾಸವಾಗಿರುವ ವ್ಯಕ್ತಿಯೊಬ್ಬರು ಮನೆಯ ಬೀಗ ಹಾಕಿಕೊಂಡು ಯೋಗಾ ತರಬೇತಿಗೆ ಹೋಗಿದ್ದ ವೇಳೆ ಚಿನ್ನ ಹಾಗೂ ನಗದು ಕಳ್ಳತನ ಮಾಡಲಾಗಿತ್ತು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆ ಕೈಗೊಂಡರು. ಅಗ್ರಹಾರ ದಾಸರಹಳ್ಳಿಯ ಬಳಿ ₹ 8,100 ನಗದು ಮತ್ತು ಕೃತ್ಯಕ್ಕೆ ಬಳಸಿದ ಆಟೊ ಸಮೇತ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆಯಲಾಯಿತು. ಬಳಿಕ ಅವರು ನೀಡಿದ ಮಾಹಿತಿ ಆಧರಿಸಿ ಉತ್ತರ ಕನ್ನಡ ಜಿಲ್ಲೆಯ ಗೋವಾ ರಸ್ತೆಯಲ್ಲಿರುವ ಅನ್ಮೋಡ್ ವಿಲ್ಲೇಜ್ ಚೆಕ್ಪೋಸ್ಟ್ ಬಳಿ ಬಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಕಳವು ಮಾಡಿರುವುದಾಗಿ ತಪ್ಪೊಪ್ಪಿಕೊಂಡ ಎಂದು ಹೇಳಿದರು.

ಆರೋಪಿಗಳನ್ನು ಕಸ್ಟಡಿಗೆ ಪಡೆದು ಹೆಚ್ಚಿನ ವಿಚಾರಣೆಗೆ ಒಳಪಡಿಸಿದಾಗ, ಕಳವು ಮಾಡಿದ್ದ ಆಭರಣಗಳ ಪೈಕಿ ಸ್ವಲ್ಪ ಮನೆಯಲ್ಲಿಟ್ಟಿರುವುದಾಗಿ ಹಾಗೂ ಪರಿಚಯಸ್ಥನಿಗೆ ನೀಡಿರುವುದಾಗಿ ಮತ್ತು ಕೆಲವು ಆಭರಣ ಅಂಗಡಿಗಳಿಗೆ ಮಾರಾಟ ಮಾಡಿರುವುದಾಗಿ ಹೇಳಿದರು.

ಬಳಿಕ ಆರೋಪಿಗಳ ಮನೆಯಿಂದ 45 ಗ್ರಾಂ ಚಿನ್ನಾಭರಣ, ₹5,300 ನಗದು, ಪರಿಚಯಸ್ಥನಿಂದ 23 ಗ್ರಾಂ ಚಿನ್ನಾಭರಣ ಹಾಗೂ ಆಭರಣ ಅಂಗಡಿಯಿಂದ 15 ಗ್ರಾಂ ವಶಪಡಿಸಿಕೊಳ್ಳಲಾಗಿದೆ. ಒಟ್ಟಾರೆ ಆರೋಪಿಗಳಿಂದ ₹17 ಲಕ್ಷ ಮೌಲ್ಯದ ಸ್ವತ್ತು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.