ಬೆಂಗಳೂರು: ಮನೆಯ ಬಾಗಿಲಿಗೆ ಹಾಕಿದ್ದ ಬೀಗ ಒಡೆದು ಚಿನ್ನದ ಆಭರಣ ಹಾಗೂ ನಗದು ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ತಿಲಕನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯಿಂದ ₹35 ಲಕ್ಷ ಮೌಲ್ಯದ 240 ಗ್ರಾಂ ಚಿನ್ನದ ಆಭರಣ ಹಾಗೂ 89 ಗ್ರಾಂ ಬೆಳ್ಳಿಯ ಸಾಮಗ್ರಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.

ಜಯನಗರ 4ನೇ ‘ಟಿ’ ಬ್ಲಾಕ್ ನಿವಾಸಿಯೊಬ್ಬರು ಮನೆಯ ಬಾಗಿಲಿಗೆ ಬೀಗ ಹಾಕಿ ಅಂಗಡಿಗೆ ತೆರಳಿದ್ದರು. ಸ್ವಲ್ಪ ಸಮಯದ ನಂತರ ಅವರ ತಂದೆ ಮನೆಗೆ ಬಂದಾಗ ಗೇಟ್ ಹಾಗೂ ಮನೆ ಬಾಗಿಲು ತೆರೆದಿತ್ತು. ಒಳಗೆ ಹೋಗಿ ನೋಡಿದಾಗ ಬೀರುವಿನಲ್ಲಿ ಇಟ್ಟಿದ್ದ 423 ಗ್ರಾಂ ಚಿನ್ನಾಭರಣ, 110 ಗ್ರಾಂ ಬೆಳ್ಳಿ ವಸ್ತುಗಳು ಮತ್ತು ₹50 ಸಾವಿರ ಹಣ ಕಳವು ಆಗಿರುವುದು ಕಂಡುಬಂದಿತ್ತು. ಈ ಬಗ್ಗೆ ಮನೆ ಮಾಲೀಕರು ತಿಲಕನಗರ ಠಾಣೆ ಪೊಲೀಸರಿಗೆ ದೂರು ನೀಡಿದ್ದರು.
ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ತಾಂತ್ರಿಕ ಕಾರ್ಯಾಚರಣೆ ನಡೆಸಿದ್ದರು. ಇತ್ತೀಚೆಗೆ ಬಾಣಸವಾಡಿಯ ಹೋಟೆಲ್ವೊಂದರ ಬಳಿ ಅನುಮಾನಾಸ್ಪದವಾಗಿ ನಿಂತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆತ ಮನೆಗಳ್ಳತನ ಮಾಡಿರುವ ಬಗ್ಗೆ ತಿಳಿಸಿದ್ದ. ಗಿರಿನಗರ ಹಾಗೂ ಕೆ.ಆರ್. ಪುರದ ಚಿನ್ನಾಭರಣ ಅಂಗಡಿಗಳಲ್ಲಿ ಗಿರವಿ ಇಟ್ಟಿದ್ದ ಚಿನ್ನಾಭರಣ, ರಾಮಮೂರ್ತಿನಗರದ ಪಾರ್ಕ್ವೊಂದರ ಬಳಿ ನಿಲ್ಲಿಸಿದ್ದ ದ್ವಿಚಕ್ರ ವಾಹನದ ಡಿಕ್ಕಿಯಲ್ಲಿ ಇಟ್ಟಿದ್ದ ಆಭರಣಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.