ಬೆಂಗಳೂರು: ಬೆಂಗಳೂರು ದಕ್ಷಿಣ ನಗರಪಾಲಿಕೆ ಆಯುಕ್ತ ಕೆ.ಎನ್.ರಮೇಶ್ ಭಾನುವಾರ ಎಚ್.ಎಸ್.ಆರ್. ಲೇಔಟ್ನಲ್ಲಿನ ತ್ಯಾಜ್ಯ ನಿರ್ವಹಣಾ ವ್ಯವಸ್ಥೆಯನ್ನು ಪರಿಶೀಲಿಸಿದರು.

ಈ ವೇಳೆ ಸಾರ್ವಜನಿಕರು ಮತ್ತು ಎಚ್.ಎಸ್.ಆರ್ ಸಿಟಿಜನ್ ಫೋರಂನ ಸ್ವಯಂಸೇವಕರು ಸ್ವಚ್ಛತೆಗೆ ಕೈಗೊಂಡಿರುವ ಕಾರ್ಯಗಳನ್ನು ಶ್ಲಾಘಿಸಿದರು. ಎಚ್.ಎಸ್.ಆರ್. ಲೇಔಟ್ನಲ್ಲಿನ ಒಣ ತ್ಯಾಜ್ಯ ಸಂಗ್ರಹಣಾ ಕೇಂದ್ರಕ್ಕೆ ಭೇಟಿ ನೀಡಿದ ಆಯುಕ್ತರು, ಅಲ್ಲಿ ಪ್ರತಿದಿನ ಸುಮಾರು 5 ಟನ್ ಒಣ ತ್ಯಾಜ್ಯವನ್ನು ಸಂಸ್ಕರಿಸುತ್ತಿರುವುದನ್ನು ವೀಕ್ಷಿಸಿದರು.

ತ್ಯಾಜ್ಯ ಸಂಗ್ರಹಣಾ ವಾಹನಗಳ ಕಾರ್ಯನಿರ್ವಹಣೆಯನ್ನು ಮೇಲ್ವಿಚಾರಣೆ ಮಾಡಲು ಸ್ಥಳೀಯ ನಿವಾಸಿಗಳು ಸ್ವಯಂಸೇವಕ ರನ್ನು ನೇಮಿಸಿಕೊಂಡಿರುವುದು ಮತ್ತು ಒಣ ತ್ಯಾಜ್ಯಕ್ಕಾಗಿ ಪ್ರತ್ಯೇಕ ವಾಹನವನ್ನು ನಿರ್ವಹಿಸುತ್ತಿರುವುದು ಮಾದರಿಯಾಗಿದೆ ಎಂದು ಶ್ಲಾಘಿಸಿದರು.

ಎಚ್.ಎಸ್.ಆರ್. ಲೇಔಟ್ 7ನೇ ಸೆಕ್ಟರ್, 8ನೇ ಮುಖ್ಯರಸ್ತೆ ಮತ್ತು 22ನೇ ಅಡ್ಡರಸ್ತೆಯಲ್ಲಿ ಸುಮಾರು 600 ಮನೆಗಳಿಂದ ಉತ್ಪತ್ತಿ ಆಗುವ 500 ಕೆ.ಜಿ. ಹಸಿ ಕಸವನ್ನು ಗೊಬ್ಬರವಾಗಿ ಪರಿವರ್ತಿಸಲಾಗುತ್ತಿದೆ. ಇದನ್ನು ಸ್ಥಳೀಯ ನಿವಾಸಿಗಳೇ ತಮ್ಮ ಉದ್ಯಾನಗಳಿಗೆ ಬಳಸಿಕೊಳ್ಳುತ್ತಿದ್ದಾರೆ.

ಇದಲ್ಲದೇ ದ.ರಾ. ಬೆಂದ್ರೆ ಪಾರ್ಕ್ನಲ್ಲಿ ಎಲೆಗಳಿಂದ ಗೊಬ್ಬರ ತಯಾರಿಸುವ ಪ್ರಕ್ರಿಯೆಯನ್ನು ಆಯುಕ್ತರು ವೀಕ್ಷಿಸಿದರು. ಎನ್ಜಿಒಗಳ ಸಹಯೋಗದಲ್ಲಿ ನಡೆಯುತ್ತಿ ರುವ ಈ ಕಾರ್ಯವು ಪರಿಸರ ಸ್ನೇಹಿಯಾಗಿದೆ ಎಂದು ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-4-607814426

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.