ಬೆಂಗಳೂರು: ‘ಹೆಂಡತಿ ನನ್ನನ್ನು ಮನೆಯ ಮೆಟ್ಟಿಲುಗಳ ಮೇಲಿಂದ ಕೆಳಗೆ ತಳ್ಳಿ ಕೊಲೆಗೆ ಯತ್ನಿಸಿದ್ದಾಳೆ’ ಎಂದು ಆರೋಪಿಸಿ 30 ವರ್ಷದ ಪತಿರಾಯನೊಬ್ಬ ತನ್ನ ಪತ್ನಿ ಮತ್ತು ಅವರ ಕುಟುಂಬದ ಏಳು ಸದಸ್ಯರ ವಿರುದ್ಧ ಸಲ್ಲಿಸಿದ್ದ ಕ್ರಿಮಿನಲ್ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ತಡೆ ನೀಡಿದೆ.

ಪ್ರಕರಣ ರದ್ದುಪಡಿಸುವಂತೆ ಕೋರಿ 26 ವರ್ಷದ ಮಹಿಳೆ (ಪತ್ನಿ) ಮತ್ತು ಆಕೆಯ ಕುಟುಂಬದ 7 ಸದಸ್ಯರು ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಅರ್ಜಿದಾರರ ವಿರುದ್ಧದ ವಿಚಾರಣೆಗೆ ಮಧ್ಯಂತರ ತಡೆ ಆದೇಶ ನೀಡಿತು.

ವಿಚಾರಣೆ ವೇಳೆ ಪತಿರಾಯ ಖುದ್ದು ವಾದ ಮಂಡಿಸಿ, ‘ನನ್ನನ್ನು ಕೊಲೆ ಮಾಡಲು ಯತ್ನಿಸಿದ ಘಟನೆಯಲ್ಲಿ ನನ್ನ ಎಡಗೈಗೆ ತೀವ್ರ ಗಾಯವಾಗಿತ್ತು. ಮತ್ತೊಮ್ಮೆ ಆಕೆಯ ಕುಟುಂಬದ ಎಂಟು ಜನರು ನನ್ನ ಮನೆಗೆ ಅತಿಕ್ರಮ ಪ್ರವೇಶ ಮಾಡಿ ನನ್ನನ್ನು ಸಾಯಿಸಲು ಯತ್ನಿಸಿದ್ದಾರೆ. ಪೊಲೀಸರು ಸರಿಯಾಗಿ ತನಿಖೆ ನಡೆಸಿಲ್ಲ. ಸೂಕ್ತ ದೋಷಾರೋಪ ಪಟ್ಟಿ ಸಲ್ಲಿಸಿಲ್ಲ’ ಎಂದು ಆಕ್ಷೇಪಿಸಿದರು.

ಇದಕ್ಕೆ ಅರ್ಜಿದಾರರ ಪರ ವಕೀಲರು, ‘ಪತಿರಾಯ ಸುಳ್ಳು ಆರೋಪ ಮಾಡುತ್ತಿದ್ದಾರೆ. ಅವರು ಪತ್ನಿಯ ವಿರುದ್ಧ ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ ಸೇರಿದಂತೆ ವಿವಿಧ ಅಪರಾಧಗಳಡಿ ಕ್ರಿಮಿನಲ್ ದೂರು ದಾಖಲಿಸಿದ್ದಾರೆ’ ಎಂದರು.

ವಾದ–ಪ್ರತಿವಾದ ಆಲಿಸಿದ ನ್ಯಾಯಪೀಠ, ಪತಿರಾಯರ ಆಕ್ಷೇಪಣೆಗೆ ಸಖೇದಾಶ್ಚರ್ಯ ವ್ಯಕ್ತಪಡಿಸಿತಲ್ಲದೆ, ಅರ್ಜಿದಾರರ ವಿರುದ್ಧದ ವಿಚಾರಣೆಗೆ ತಡೆ ನೀಡಿ ಆದೇಶಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.