ಬೆಂಗಳೂರು: ಇಂಡಿಯನ್ ಅಕಾಡೆಮಿ ಪದವಿ ಕಾಲೇಜು ಬುಧವಾರ ಆಯೋಜಿಸಿದ್ದ 13ನೇ ವಿದ್ಯಾರ್ಥಿವೇತನ ವಿತರಣೆ ಸಮಾರಂಭವನ್ನು ಇಂಧನ ಸಚಿವ ಕೆ.ಜೆ. ಜಾರ್ಜ್ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ‘ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ ವಿದ್ಯಾರ್ಥಿವೇತನ ನೀಡುತ್ತಿರುವುದು ಶ್ಲಾಘನೀಯ. ವಿದ್ಯಾರ್ಥಿಗಳು ನೈತಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು. ಶಿಕ್ಷಣದ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಸಮಾಜ ಸೇವೆ ಯಲ್ಲಿ ಪಾಲ್ಗೊಳ್ಳುವ ಮೂಲಕ ವ್ಯಕ್ತಿತ್ವ ವಿಕಸನ ಮಾಡಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಇಂಡಿಯನ್ ಅಕಾಡೆಮಿ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಟಿ. ಸೋಮಶೇಖರ್ ಮಾತನಾಡಿ, ‘ಮುಂದಿನ ವರ್ಷ ಇನ್ನೂ ಹೆಚ್ಚಿನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಗುವುದು. 2026ರ ಶೈಕ್ಷಣಿಕ ಸಾಲಿನಲ್ಲಿ ಸುಮಾರು 56 ಪದವಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು’ ಎಂದು ಮಾಹಿತಿ ನೀಡಿದರು.

ಪ್ರಾಂಶುಪಾಲರಾದ ಭಾರತಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-4-1072890550

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.