ಬೆಂಗಳೂರು: ‘ರೋಗಿಗಳ ಆರೈಕೆ ಮತ್ತು ಚಿಕಿತ್ಸೆಯಲ್ಲಿ ಶುಶ್ರೂಷಕರ ಪಾತ್ರ ಪ್ರಮುಖವಾಗಿದ್ದು, ಅವರು ರೋಗಿಯನ್ನು ಪ್ರತಿ ಹಂತದಲ್ಲಿಯೂ ಗಮನಿಸುತ್ತಾರೆ’ ಎಂದು ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ನಿರ್ದೇಶಕ ಡಾ.ಟಿ.ನವೀನ್ ಅಭಿಪ್ರಾಯಪಟ್ಟರು.

ಸಂಸ್ಥೆಯು ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಶುಶ್ರೂಷಕರ ದಿನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

‘ವೈದ್ಯರು ರೋಗಿಯನ್ನು ತಪಾಸಣೆ ಮಾಡಿ, ಚಿಕಿತ್ಸೆ ಕುರಿತು ಅಗತ್ಯ ಸಲಹೆ, ಸೂಚನೆಗಳನ್ನು ಶುಶ್ರೂಷಕರಿಗೆ ನೀಡುತ್ತಾರೆ. ಚಿಕಿತ್ಸೆಯಲ್ಲಿ ಯಾವುದೇ ರೀತಿಯ ವ್ಯತ್ಯಯವಾಗದಂತೆ ನೋಡಿಕೊಳ್ಳುವ ಶುಶ್ರೂಷಕರ ಪಾತ್ರ ಅನನ್ಯ. ರೋಗಿ ಮತ್ತು ಶುಶ್ರೂಷಕರ ನಡುವಿನ ಸಂಬಂಧ ಒಂದು ರೀತಿ ತಾಯಿ–ಮಕ್ಕಳ ಸಂಬಂಧ ಇದ್ದಂತೆ. ಶುಶ್ರೂಷಕರ ನಗುಮುಖದ ಸೇವೆಯು ರೋಗಿಯ ಆತ್ಮವಿಶ್ವಾಸ ಹೆಚ್ಚಿಸುತ್ತದೆ’ ಎಂದು ಅವರು ಹೇಳಿದರು.

‘ನಮ್ಮ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡಿದ ಶುಶ್ರೂಷಕರು ವಿವಿಧೆಡೆ ಕಾರ್ಯನಿರ್ವಹಿಸುತ್ತಿದ್ದಾರೆ. ಕ್ಯಾನ್ಸರ್ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವಲ್ಲಿ ಸಂಸ್ಥೆ ಮುಂಚೂಣಿಯಲ್ಲಿರುವುದಕ್ಕೆ ಶುಶ್ರೂಷಕರ ಸಹಕಾರವೂ ಪ್ರಮುಖ ಕಾರಣ’ ಎಂದು ಅಭಿಪ್ರಾಯಪಟ್ಟರು.

ಮಣಿಪಾಲ್ ಹೆಲ್ತ್ ಎಂಟರ್ಪ್ರೈಸಸ್ನ (ನರ್ಸಿಂಗ್) ವ್ಯವಸ್ಥಾಪಕಿ ಸರೋಜಾ ಜೈಕುಮಾರ್, ‘ರೋಗಿಯ ನಾಡಿ ಮಿಡಿತ, ಅವರ ಚೇತರಿಕೆಯ ಹಾದಿ ವೈದ್ಯರಿಗಿಂತಲೂ ಶುಶ್ರೂಷಕರಿಯರಿಗೆ ಬೇಗ ತಿಳಿಯುತ್ತದೆ. ರೋಗಿಗಳ ಜತೆಗೆ ವೈದ್ಯರಿಗಿಂತಲೂ ಹೆಚ್ಚು ಬಾಂಧವ್ಯ ಹೊಂದಿರುತ್ತಾರೆ’ ಎಂದು ಹೇಳಿದರು.

ಸಂಸ್ಥೆಯ ನಿವಾಸಿ ವೈದ್ಯಾಧಿಕಾರಿ ಡಾ.ಕೃಷ್ಣಪ್ಪ, ‘ಕಿದ್ವಾಯಿ ಸಂಸ್ಥೆಗೆ ಭೇಟಿ ನೀಡುವ ಕ್ಯಾನ್ಸರ್ ಪೀಡಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಇದಕ್ಕೆ ಅನುಗುಣವಾಗಿ ವೈದ್ಯಕೀಯ ಸೌಲಭ್ಯಗಳನ್ನು ವಿಸ್ತರಿಸಿಕೊಳ್ಳಲಾಗುತ್ತಿದೆ’ ಎಂದರು.

ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಆಶಾ ಪರ್ವಿನ್, ಆರ್ಥಿಕ ಸಲಹೆಗಾರ್ತಿ ಕೆ.ಸಿ.ಸೌಮ್ಯರಾಣಿ, ಮಣಿಪಾಲ್ ಹೆಲ್ತ್ ಎಂಟರ್ಪ್ರೈಸಸ್ ಸಂಸ್ಥೆಯ (ನರ್ಸಿಂಗ್) ವ್ಯವಸ್ಥಾಪಕಿ ಸರೋಜಾ ಜೈಕುಮಾರ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-4-317785192

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.