ಬೆಂಗಳೂರು: ನಗರದ ‘ದಿ ಜನತಾ ಕೋ–ಆಪರೇಟಿವ್ ಬ್ಯಾಂಕ್ ಲಿಮಿಟೆಡ್’ ಗ್ರಾಹಕರ ಕುಂದುಕೊರತೆಗಳನ್ನು ಆಲಿಸಲು ಗ್ರಾಹಕರ ಸಮಾವೇಶವನ್ನು ಆಯೋಜಿಸಿತ್ತು.

ಸಮಾವೇಶದಲ್ಲಿ ಬ್ಯಾಂಕ್ನ ಠೇವಣಿದಾರರು, ಸದಸ್ಯರು ಪಾಲ್ಗೊಂಡು ತಮ್ಮ ಅನಿಸಿಕೆಗಳು ಹಾಗೂ ಅಹವಾಲು ಗಳನ್ನು ವ್ಯಕ್ತಪಡಿಸಿದ್ದಾರೆ ಎಂದು ಬ್ಯಾಂಕ್ ಪ್ರಕಟಣೆಯಲ್ಲಿ ತಿಳಿಸಿದೆ.

ಈ ವೇಳೆ ಬ್ಯಾಂಕ್ನ ಅಧ್ಯಕ್ಷರು, ಉಪಾಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು ಹಾಗೂ ಇತರರಿದ್ದರು.

‘ದಿ ಜನತಾ ಕೋ–ಆಪರೇಟಿವ್ ಬ್ಯಾಂಕ್’ ಮಲ್ಲೇಶ್ವರದಲ್ಲಿ ಕೇಂದ್ರ ಕಚೇರಿ ಹೊಂದಿದ್ದು, ನಗರದಲ್ಲಿ 7 ಶಾಖೆಗಳನ್ನು ಹೊಂದಿದೆ. 30 ಸಾವಿರ ಗ್ರಾಹಕರನ್ನು ಹೊಂದಿದೆ. ಮಾರ್ಚ್ 31ಕ್ಕೆ ಕೊನೆಗೊಂಡ ಆರ್ಥಿಕ ವರ್ಷದ ಪ್ರಕಾರ ₹858 ಕೋಟಿ ಬಂಡವಾಳ ಹೊಂದಿದ್ದು, ಮುಂದಿನ ದಿನಗಳಲ್ಲಿ ₹1 ಸಾವಿರ ಕೋಟಿಗೆ ಹೆಚ್ಚಿಸುವ ಗುರಿ ಹೊಂದಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-4-1796280812

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.