ಬೆಂಗಳೂರು: ಬೆಂಗಳೂರು ದಕ್ಷಿಣ ನಗರ ಪಾಲಿಕೆ ಜಯನಗರದ 42 ರಸ್ತೆಗಳಲ್ಲಿ ಪಾರ್ಕಿಂಗ್ ನೀತಿಯನ್ನು ಜಾರಿಗೆ ತರಲಾಗುತ್ತಿದೆ ಎಂದು ಆಯುಕ್ತ ಕೆ.ಎನ್. ರಮೇಶ್ ತಿಳಿಸಿದರು.

ಪಾಲಿಕೆ ವ್ಯಾಪ್ತಿಯಲ್ಲಿ ಇದೇ ಮಾದರಿಯಲ್ಲಿ ಉಳಿದ ವಿಭಾಗಗಳಲ್ಲಿ ಪಾರ್ಕಿಂಗ್ ನೀತಿಯನ್ನು ಹಂತ-ಹಂತವಾಗಿ ಜಾರಿಗೆ ತರಲಾಗುವುದು ಎಂದರು.

ನಗರ ಪಾಲಿಕೆಯಲ್ಲಿರುವ ಸಮಸ್ಯೆಗಳ ಪರಿಹಾರಕ್ಕಾಗಿ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು ಹೊಸ ತಂತ್ರಜ್ಞಾನ ಹಾಗೂ ಪರಿಹಾರಗಳೊಂದಿಗೆ ಮುಂದೆ ಬಂದರೆ ಪಾಲಿಕೆಯು ಕೈಜೋಡಿಸಲಿದೆ. ಕೋರಮಂಗಲದ ಅಪಾರ್ಟ್ಮೆಂಟ್ಗಳ ಮಾದರಿಯಲ್ಲಿ ಒಣ ಕಸವನ್ನು ತಾವೇ ವಿಂಗಡಿಸಿ ವಾರಕ್ಕೆರಡು ಬಾರಿ ಸಂಗ್ರಹಣಾ ಕೇಂದ್ರಕ್ಕೆ ಕಳುಹಿಸುವ ವ್ಯವಸ್ಥೆಯನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-4-1683812012

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.