ಬೆಂಗಳೂರು: ಮನೆಯ ಬೀಗ ಮುರಿದು ಕಿಟಕಿಯ ಗ್ರಿಲ್ ತುಂಡರಿಸಿ ಚಿನ್ನಾಭರಣ ದೋಚಿದ್ದ ಇಬ್ಬರು ಆರೋಪಿಗಳನ್ನು ಕೊಡಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ರೋಹನ್ ಹಾಗೂ ಆಕಾಶ್ ಎಂಬುವರನ್ನು ಬಂಧಿಸಿ, 2 ಕೆ.ಜಿ ಬೆಳ್ಳಿ ಜಪ್ತಿ ಮಾಡಲಾಗಿದೆ.

ಸಹಕಾರ ನಗರದ ನಿವಾಸಿ ಪದ್ಮನಾಭ್ ಕಳೆದ ನವೆಂಬರ್ನಲ್ಲಿ ಮನೆಯ ಬಾಗಿಲ ಬೀಗ ಹಾಕಿಕೊಂಡು ಮನೆ ನೋಡಿಕೊಳ್ಳಲು ಸಂಜಯ್ ಎಂಬ ಭದ್ರತಾ ಸಿಬ್ಬಂದಿಯನ್ನು ನೇಮಕ ಮಾಡಿದ್ದರು. ಆತ ರಾತ್ರಿ ಮನೆಯ ಬಳಿ ಕರ್ತವ್ಯ ನಿರ್ವಹಿಸಿ ಬೆಳಿಗ್ಗೆ ವಿಶ್ರಾಂತಿಗೆ ತೆರಳಿದ್ದ ಸಂದರ್ಭದಲ್ಲಿ ಕಳ್ಳರು ಮನೆಯ ಕಿಟಿಕಿಯ ಗ್ರಿಲ್ ಕತ್ತರಿಸಿ ಒಳಗೆ ನುಗ್ಗಿ ಸುಮಾರು 3 ಕೆ.ಜಿ. ಬೆಳ್ಳಿ ವಸ್ತುಗಳು ಮತ್ತು 250 ಗ್ರಾಂ ಆಭರಣಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು.

ಸಂಜಯ್ ಸಂಜೆ ಕೆಲಸಕ್ಕೆ ಬಂದಾಗ ಕಳ್ಳತನವಾಗಿರುವುದು ಗೊತ್ತಾಯಿತು. ಕೊಡಿಗೆಹಳ್ಳಿ ಠಾಣೆ ಪೊಲೀಸರು ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-4-1399851484

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.