ಬೆಂಗಳೂರು: ಹೆಸರಘಟ್ಟ ಮುಖ್ಯರಸ್ತೆಯ ಹಾವನೂರು ಬಡಾವಣೆಯ ಎಂ.ಬಿ. ಜ್ಯುವೆಲರಿ ಮಳಿಗೆಯ ಹಿಂಭಾಗದ ಗೋಡೆ ಕೊರೆದು, 70 ಕೆ.ಜಿ ಬೆಳ್ಳಿ ಸಾಮಗ್ರಿ ಕಳ್ಳತನ ಮಾಡಿದ್ದ ಮೂವರನ್ನು ಬಾಗಲಗುಂಟೆ ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನದ ಸುರೇಶ್, ಧನರಾಮ್, ನೇಮಿಚಂದ್ರ ಬಂಧಿತರು.

ಆರೋಪಿಗಳಿಂದ 29 ಕೆ.ಜಿ ಬೆಳ್ಳಿ ಸಾಮಗ್ರಿ ವಶಕ್ಕೆ ಪಡೆಯಲಾಗಿದೆ. ಪ್ರಮುಖ ಆರೋಪಿ ಮಹೇಂದ್ರ ತಲೆಮರೆಸಿಕೊಂಡಿದ್ದು, ಅವರ ಪತ್ತೆಗಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದರು. ಮಳಿಗೆ ಮಾಲೀಕ ಕೆ.ಮಹೇಂದ್ರ ಕುಮಾರ್ ನೀಡಿದ ದೂರಿನ ಮೇಲೆ ಕಾರ್ಯಾಚರಣೆ ನಡೆಸಲಾಗಿತ್ತು ಎಂದು ಪೊಲೀಸರು ಹೇಳಿದರು.

ಆರೋಪಿಗಳು ವ್ಯವಸ್ಥಿತವಾಗಿ ಸಂಚು ರೂಪಿಸಿ ಕೃತ್ಯ ಎಸಗಿರುವುದು ತನಿಖೆ ವೇಳೆ ಪತ್ತೆಯಾಗಿದೆ. ಕಳ್ಳತನ ಮಾಡಿದ ಬಳಿಕ ಮೂವರೂ ಹೈದರಾಬಾದ್ಗೆ ತೆರಳಿ ಬೆಳ್ಳಿ ಮಾರಾಟ ಮಾಡಿ ರಾಜಸ್ಥಾನಕ್ಕೆ ಹೋಗಿದ್ದರು. ರಾಜಸ್ಥಾನಕ್ಕೆ ತೆರಳಿದ್ದ ವಿಶೇಷ ಪೊಲೀಸ್ ತಂಡವು ತಾಂತ್ರಿಕ ಸುಳಿವು ಆಧರಿಸಿ ಆರೋಪಿಗಳನ್ನು ಬಂಧಿಸಿ ನಗರಕ್ಕೆ ಕರೆತಂದಿದೆ ಎಂದು ಮೂಲಗಳು ಹೇಳಿವೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-15-2071092714

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.