ಬೆಂಗಳೂರು: ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೆ.ನಾರಾಯಣಪುರದಖಾಲಿ ಪ್ರದೇಶದಲ್ಲಿ ಹಾಕಲಾಗಿದ್ದ ಶೆಡ್ನಲ್ಲಿ ಸೋಮವಾರ ಮಧ್ಯಾಹ್ನ ಸಂಭವಿಸಿದ ಬೆಂಕಿ ಅವಘಡದಲ್ಲಿ ಉಸಿರುಗಟ್ಟಿ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ.

ಅರ್ಜುನ್ (5) ಹಾಗೂ ಆಶಾ (3) ಮೃತ ಮಕ್ಕಳು. ಕೃಷ್ಣಮೂರ್ತಿ ಎಂಬುವವರಿಗೆ ಸೇರಿದ ಖಾಲಿ ಜಾಗದಲ್ಲಿ ಹೊರ ಜಿಲ್ಲೆ ಹಾಗೂ ಹೊರ ರಾಜ್ಯದ ಕಾರ್ಮಿಕರು ಹತ್ತು ಶೆಡ್ಗಳನ್ನು ನಿರ್ಮಿಸಿಕೊಂಡು ವಾಸ ಮಾಡುತ್ತಿದ್ದರು. ಖಾಲಿಯಿದ್ದ ಶೆಡ್ನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ ಎಂದು ಪೊಲೀಸ್ ಮೂಲಗಳು ಹೇಳಿವೆ.

ಸೋಮವಾರ ಬೆಳಿಗ್ಗೆ 9ರ ಸುಮಾರಿಗೆ ಮಕ್ಕಳನ್ನು ಅಜ್ಜಿ ಬಳಿ ಬಿಟ್ಟು ಪೋಷಕರು ಕೆಲಸಕ್ಕೆ ತೆರಳಿದ್ದರು. ಅಜ್ಜಿ ಕೆಲಸದಲ್ಲಿ ಮಗ್ನರಾಗಿದ್ದಾಗ ಇಬ್ಬರು ಮಕ್ಕಳು ಖಾಲಿ ಶೆಡ್ಗೆ ಹೋಗಿ ಆಟವಾಡುತ್ತಿದ್ದರು.ಆ ಸಂದರ್ಭದಲ್ಲಿ ಶೆಡ್ಗೆ ಬೆಂಕಿ ತಗುಲಿ ಮಕ್ಕಳು ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದರು.

‘ಬೆಂಕಿಯಿಂದ ಮಕ್ಕಳು ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಇಬ್ಬರು ಮಕ್ಕಳ ಮೈಮೇಲೆ ಸುಟ್ಟ ಗಾಯಗಳಿವೆ. ಒಂದು ಮಗು ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಂದು ಮಗು ಆಸ್ಪತ್ರೆಯಲ್ಲಿ ಮೃತಪಟ್ಟಿದೆ’ ಎಂದು ಪೊಲೀಸರು ಹೇಳಿದರು.

ಬೆಂಕಿ ಅವಘಡದ ಕುರಿತು ಸೋಮವಾರ ಮಧ್ಯಾಹ್ನ ಎರಡು ಗಂಟೆಯ ಸುಮಾರಿಗೆ ಮಾಹಿತಿ ಬಂದಿತ್ತು. ಸ್ಥಳಕ್ಕೆ ತಲುಪುವಷ್ಟರಲ್ಲಿಮಕ್ಕಳು ಮೃತರಾಗಿದ್ದರು. ಮೃತ ಮಕ್ಕಳ ಪೋಷಕರು, ರಾಯಚೂರು ಜಿಲ್ಲೆಯ ದೇವದುರ್ಗದವರು. ಕೂಲಿ ಕೆಲಸಕ್ಕಾಗಿ ನಾಲ್ಕು ತಿಂಗಳ ಹಿಂದೆ ನಗರಕ್ಕೆ ಬಂದಿದ್ದರು ಎಂದು ಪೊಲೀಸರು ಹೇಳಿದರು.

ಘಟನಾ ಸ್ಥಳಕ್ಕೆ ಸುಕೊ (ಸೀನ್ ಆಫ್ ಕ್ರೈಂ) ಸಿಬ್ಬಂದಿ ಹಾಗೂ ಬೆಸ್ಕಾಂ ಸಿಬ್ಬಂದಿ ಭೇಟಿ ಪರಿಶೀಲನೆ ನಡೆಸಿದರು. ಶೆಡ್ನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬಟ್ಟೆಗಳಿದ್ದವು. ಅವುಗಳು ಸಂಪೂರ್ಣ ಸುಟ್ಟು ಹೋಗಿವೆ. ಬೆಂಕಿ ಅವಘಡಕ್ಕೆ ಕಾರಣ ಪತ್ತೆಯಾಗಿಲ್ಲ. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.

ಕೊತ್ತನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-4-1082045963

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.