ಶುಕ್ರವಾರ, ಡಿಸೆಂಬರ್ 13, 2019
26 °C

25ರಿಂದ ‘ಕಡಲೆಕಾಯಿ ಪರಿಷೆ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ನಗರದ ಐತಿಹಾಸಿಕ ಕಡಲೆಕಾಯಿ ಪರಿಷೆಗೆ ಬಸವನಗುಡಿ ಸಜ್ಜಾಗಿದೆ.

ಪ್ರತಿವರ್ಷ ಕಾರ್ತಿಕ ಮಾಸದ ಕೊನೆಯ ಸೋಮವಾರದಿಂದ ಮೂರು ದಿನಗಳ ಕಾಲ ವಿಜೃಂಭಣೆಯಿಂದ ನಡೆಯುವ ಪರಿಷೆಗೆ ರಾಜ್ಯದ ವಿವಿಧ ಜಿಲ್ಲೆಗಳು ಮಾತ್ರವಲ್ಲದೆ ತಮಿಳುನಾಡು, ಆಂಧ್ರಪ್ರದೇಶದ ರೈತರೂ ಬರುತ್ತಾರೆ.

ದೊಡ್ಡಬಳ್ಳಾಪುರ, ಚಿಕ್ಕಬಳ್ಳಾಪುರ, ಕೋಲಾರ, ಗೌರಿಬಿದನೂರು, ತುಮಕೂರು, ಚಿಂತಾಮಣಿ, ಕನಕಪುರ, ಮಾಗಡಿ, ರಾಮನಗರಗಳಲ್ಲಿ ಬೆಳೆದ ಕಡಲೆಕಾಯಿ ಪರಿಷೆಯಲ್ಲಿರಲಿವೆ. ಗಾತ್ರ ಹಾಗೂ ರುಚಿಯಲ್ಲಿ ಭಿನ್ನವಾಗಿರುವ ನಾಟಿ, ಸಾಮ್ರಾಟ್, ಜೆಎಲ್, ಗಡಂಗ್‌, ಬಾದಾಮಿ ತಳಿಯ ಕಡಲೆಕಾಯಿ ಪರಿಷೆಯ ಪ್ರಮುಖ ಆಕರ್ಷಣೆಯಾಗಿರಲಿವೆ.

‘ಜಾತ್ರೆಯ ಆಕರ್ಷಣೆಯೇ ಕಡಲೆಕಾಯಿ. ರಾಜ್ಯದಲ್ಲಿ ಈ ಬಾರಿ ಉತ್ತಮ ಮಳೆಯಾಗಿರುವ ಕಾರಣ ರೈತರು ಹೆಚ್ಚಾಗಿ ಕಡಲೆಕಾಯಿ ಬೆಳೆದಿದ್ದಾರೆ. ಈ ಪರಿಷೆಯಲ್ಲಿ ಕಳೆದ ಬಾರಿಗಿಂತ ಹೆಚ್ಚು ಕಡಲೇಕಾಯಿ ಬರುವ ನಿರೀಕ್ಷೆ ಇದೆ’ ಎನ್ನುತ್ತಾರೆ ಶಾಸಕ ಎಲ್‌.ಎ.ರವಿಸುಬ್ರಹ್ಮಣ್ಯ.

‘ಪರಿಷೆ ಸಿದ್ಧತೆಗಳ ಬಗ್ಗೆ ಈ ವಾರಾಂತ್ಯದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಆಯೋಜಕರ ಜೊತೆ ಸಭೆ ನಡೆಯಲಿದೆ. ಸಭೆಯಲ್ಲಿ ಪರಿಷೆಗೆ ಬೇಕಾದ ತಯಾರಿಗಳ ಬಗ್ಗೆ ರೂಪುರೇಷೆಗಳು ಸಿದ್ಧವಾಗಲಿವೆ. ಪರಿಷೆಯ ವೇಳೆ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಹೆಚ್ಚಿನ ಒತ್ತು ನೀಡಲಾಗುವುದು’ ಎಂದು ತಿಳಿಸಿದರು.

‘ಪರಿಷೆಗೆ ನೀತಿ ಸಂಹಿತೆ ಅಡ್ಡಿಯಿಲ್ಲ’
‘ಕಡಲೆಕಾಯಿ ಪರಿಷೆ ಶತಮಾನಗಳಿಂದ ನಡೆಯುತ್ತಿರುವ ಸಾಂಪ್ರದಾಯಿಕ ಆಚರಣೆ. ಈ ಬಾರಿ ಉಪಚುನಾವಣೆಯ ನೀತಿ ಸಂಹಿತೆಯಿಂದ ಪರಿಷೆಗೆ ಯಾವುದೇ ಅಡ್ಡಿ, ಆತಂಕಗಳು ಎದುರಾಗುವುದಿಲ್ಲ’ ಎಂದು ರವಿ ಸುಬ್ರಹ್ಮಣ್ಯ ತಿಳಿಸಿದರು.

ಪರಿಷೆಯಲ್ಲಿ ಎರಡು ಸಾವಿರಕ್ಕೂ ಅಧಿಕ ಮಳಿಗೆಗಳು ಇರಲಿವೆ. ಕಳೆದ ವರ್ಷ ಏಳು ಲಕ್ಷ ಮಂದಿ ಭೇಟಿ ನೀಡಿದ್ದರು. ಈ ಬಾರಿ ವೀಕ್ಷಕರ ಸಂಖ್ಯೆ ಇನ್ನಷ್ಟು ಹೆಚ್ಚಲಿದೆ ಎಂದು ಮಾಹಿತಿ ನೀಡಿದರು.
*
ಪರಿಷೆಯಲ್ಲಿ ಎರಡು ಸಾವಿರಕ್ಕೂ ಅಧಿಕ ಮಳಿಗೆಗಳು ಇರಲಿವೆ. ಕಳೆದ ವರ್ಷ ಏಳು ಲಕ್ಷ ಮಂದಿ ಭೇಟಿ ನೀಡಿದ್ದರು. ಈ ಬಾರಿ ವೀಕ್ಷಕರ ಸಂಖ್ಯೆ ಇನ್ನಷ್ಟು ಹೆಚ್ಚಲಿದೆ.
–ಎಲ್‌.ಎ.ರವಿಸುಬ್ರಹ್ಮಣ್ಯ, ಶಾಸಕ

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು