ಬೆಂಗಳೂರು: ಪೂರ್ವ ನಗರ ಪಾಲಿಕೆಯ ಮಹದೇವಪುರ ವಲಯದ ಕಾಡುಗೋಡಿಯಲ್ಲಿ ಘನತ್ಯಾಜ್ಯವನ್ನು ಅಕ್ರಮವಾಗಿ ಸಾಗಿಸಿ ಖಾಲಿ ಜಾಗಗಳಲ್ಲಿ ಸುರಿಯುತ್ತಿದ್ದ 6 ವಾಹನಗಳನ್ನು ಪಾಲಿಕೆ ಅಧಿಕಾರಿಗಳು ವಶಪಡಿಸಿಕೊಂಡಿದ್ದು ಎಫ್ಐಆರ್ ದಾಖಲಿಸಿದ್ದಾರೆ.

ಕಾಡುಗೋಡಿ ವ್ಯಾಪ್ತಿಯ ಸಿದ್ದಾರ್ಥ ಲೇಔಟ್ ಸಮೀಪದ ಸರ್ವೇ ನಂ.130, 131 ಹಾಗೂ 142ಕ್ಕೆ ಹೊಂದಿಕೊಂಡಿರುವ ದಕ್ಷಿಣ ಪಿನಾಕಿನಿ ನದಿಗೆ ತ್ಯಾಜ್ಯ ಸುರಿಯುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರು ಬಂದಿತ್ತು. ಈ ಬಗ್ಗೆ ನಿಗಾ ಇಟ್ಟ ಅಧಿಕಾರಿಗಳು ಮೇ 29ರಂದು ಐದು ವಾಹನಗಳನ್ನು ಹಾಗೂ ಮೇ 30ರಂದು ಒಂದು ವಾಹನವನ್ನು ವಶಕ್ಕೆ ಪಡೆದರು ಎಂದು ಪೂರ್ವ ನಗರ ಪಾಲಿಕೆ ಆಯುಕ್ತ ಡಿ.ಎಸ್. ರಮೇಶ್ ಮಾಹಿತಿ ನೀಡಿದರು.

ವಿವಿಧ ಪ್ರದೇಶಗಳ ವಾಣಿಜ್ಯ ಮತ್ತು ವಸತಿ ಸಮುಚ್ಚಯಗಳ ಘನತ್ಯಾಜ್ಯವನ್ನು ಸಂಗ್ರಹಿಸಿ ವಿಲೇವಾರಿ ಮಾಡಲು ಇಕೋ ಸ್ಪೀಯರ್ ವೆಸ್ಟ್ ಸೆಲ್ಯೂಷನ್ ಕಂಪನಿಗೆ ಕಾರ್ಯಾದೇಶ ನೀಡಲಾಗಿದೆ. ಆದರೆ, ನೌಶಾದ್ ಮತ್ತು ಇತರರ ತಂಡವು ಕಂಪನಿ ಹೆಸರಿನಲ್ಲಿ ನಕಲಿ ಗುರುತಿನ ಚೀಟಿ ಬಳಸಿಕೊಂಡು ವಿವಿಧ ಪ್ರದೇಶಗಳಿಂದ ಅನಧಿಕೃತವಾಗಿ ಬಲ್ಕ್ ತ್ಯಾಜ್ಯವನ್ನು ಸಂಗ್ರಹಿಸಿ ತಂದು ಇಲ್ಲಿ ಸುರಿಯುತ್ತಿದ್ದರು ಎಂದು ತಿಳಿಸಿದರು.

ನಗರ ಪಾಲಿಕೆಯ ಸಹಾಯಕ ಪ್ರಧಾನ ವ್ಯವಸ್ಥಾಪಕರು ನೀಡಿದ ದೂರಿನ ಆಧಾರದ ಮೇಲೆ ಎಫ್ಐಆರ್ ದಾಖಲಿಸಲಾಗಿದ್ದು, ವಾಹನಗಳ ಮಾಲೀಕರು, ಚಾಲಕರು, ಸಂಬಂಧಪಟ್ಟ ವ್ಯಕ್ತಿಗಳು ಹಾಗೂ ತ್ಯಾಜ್ಯ ಸುರಿಯಲು ಅವಕಾಶ ನೀಡಿದ ಭೂ ಮಾಲೀಕರ ವಿರುದ್ಧವೂ ಕಾನೂನು ಕ್ರಮ ಜರುಗಿಸಲು ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಆಯುಕ್ತರು ತಿಳಿಸಿದರು.

ಕಾರ್ಯಾಚರಣೆಯಲ್ಲಿ ಘನತ್ಯಾಜ್ಯ ನಿರ್ವಹಣಾ ವಿಭಾಗದ ಸಹಾಯಕ ಪ್ರಧಾನ ವ್ಯವಸ್ಥಾಪಕರು, ಮಾರ್ಷಲ್ ಸೂಪರ್ ವೈಸರ್, ವಾರ್ಡ್ ಮಾರ್ಷಲ್ , ಆರೋಗ್ಯ ಪರಿವೀಕ್ಷಕರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-4-1030600814

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.