ಬೆಂಗಳೂರು: ಶಿವಾಜಿನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಕಾಮರಾಜ ರಸ್ತೆಯ ನಾಲಾ ಕ್ರಾಸ್ ಹತ್ತಿರ ಜಿಬಿಎ ವತಿಯಿಂದ ಆರ್ಸಿಸಿ ಕಲ್ವರ್ಟ್ ನಿರ್ಮಿಸುವ ಕಾಮಗಾರಿ ಕೈಗೊಳ್ಳುತ್ತಿದ್ದು, ಮೇ 24ರಿಂದ 60 ದಿನ ಸಂಚಾರ ಮಾರ್ಪಾಡು ಮಾಡಲಾಗಿದೆ.

ಕಾಮರಾಜ ರಸ್ತೆಯ ವಿಠೋಬಾ ದೇವಸ್ಥಾನದಿಂದ ನಾಲಾ ರಸ್ತೆಯವರೆಗೆ ಹಾಗೂ ಕೆ.ಆರ್.ರಸ್ತೆ–ಕಬ್ಬನ್ ರಸ್ತೆ ಜಂಕ್ಷನ್ನಿಂದ ಡಿಕನ್ಸನ್ ಜಂಕ್ಷನ್ ಕಡೆಗೆ ಬರುವ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.

ಪರ್ಯಾಯ ಮಾರ್ಗ: ಕಮರ್ಷಿಯಲ್ ಸ್ಟ್ರೀಟ್ ಕಡೆಯಿಂದ ಕಾಮರಾಜ ರಸ್ತೆಯ ಮೂಲಕ ಪುಲಕೇಶಿ ನಗರ ಮತ್ತು ಬಾಣಸವಾಡಿ ಕಡೆಗೆ ಸಂಚರಿಸುವ ಎಲ್ಲಾ ರೀತಿಯ ವಾಹನಗಳು ಕಾಮರಾಜ ರಸ್ತೆಯ ವಿಠೋಬಾ ದೇವಸ್ಥಾನ ಹತ್ತಿರ ಬಲ ತಿರುವು ಪಡೆಯಬೇಕು. ವೀರಪಿಳ್ಳೈ ಸ್ಟ್ರೀಟ್ ಮೂಲಕ ನಾಗಮ್ಮ ದೇವಸ್ಥಾನ ಹತ್ತಿರ ಎಡ ತಿರುವು ಪಡೆದು ಸೇಂಟ್ ಜಾನ್ ರಸ್ತೆಯ ಮೂಲಕ ಹೋಗಬಹುದು.

ಕಬ್ಬನ್ ರಸ್ತೆ ಕಡೆಯಿಂದ ಕಾಮರಾಜ ರಸ್ತೆಯ ಮೂಲಕ ಪುಲಕೇಶಿ ನಗರ ಮತ್ತು ಬಾಣಸವಾಡಿ ಕಡೆಗೆ ಸಂಚರಿಸುವ ವಾಹನಗಳು ಕೆ.ಆರ್.ರಸ್ತೆ–ಕಬ್ಬನ್ ರಸ್ತೆ ಜಂಕ್ಷನ್ ಹತ್ತಿರ ಬಲ ತಿರುವ ಪಡೆದು ಕಬ್ಬನ್ ರಸ್ತೆಯ ಮೂಲಕ ತೆರಳಬೇಕು. ಮಣಿಪಾಲ್ ಜಂಕ್ಷನ್ ಹತ್ತಿರ ಎಡ ತಿರುವು ಪಡೆದು ಡಿಕನ್ಸನ್ ರಸ್ತೆ ಮೂಲಕ ನೇರವಾಗಿ ತೆರಳಿ ಬ್ಲೂ–ಸ್ಟೋನ್ ಹತ್ತಿರ ಬಲ ತಿರುವು ಪಡೆದು ಸೇಂಟ್ ಜಾನ್ ರಸ್ತೆಯ ಮೂಲಕ ಸಾಗಬೇಕು.

ಡಿಸ್ಪೆನ್ಸರಿ ರಸ್ತೆ (ಆಲೀಸ್ ಜಂಕ್ಷನ್) ಕಡೆಯಿಂದ ಕಾಮರಾಜ ರಸ್ತೆಯ ಮೂಲಕ ಪುಲಕೇಶಿ ನಗರ ಮತ್ತು ಬಾಣಸವಾಡಿ ಕಡೆಗೆ ಸಂಚರಿಸುವ ವಾಹನಗಳು ಡಿಕನ್ಸನ್ ರಸ್ತೆ ಮೂಲಕ ನೇರವಾಗಿ ಸಾಗಿ ಬ್ಲೂ ಸ್ಟೋನ್ ಹತ್ತಿರ ಎಡ ತಿರುವು ಪಡೆದು ಸೇಂಟ್ ಜಾನ್ ರಸ್ತೆ ಮೂಲಕ ಸಂಚರಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-4-178911124

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.