ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು ಕಂಬಳ: ಭಾರಿ ವಾಹನಗಳ‌ ಸಂಚಾರ ನಿಷೇಧ

Published 25 ನವೆಂಬರ್ 2023, 15:48 IST
Last Updated 25 ನವೆಂಬರ್ 2023, 15:48 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ‌ ಕಂಬಳ ಆಯೋಜಿಸಲಾಗಿದ್ದು, ಭಾನುವಾರ (ನ. 26) ವಾಹನಗಳ ದಟ್ಟಣೆ ಉಂಟಾಗದಂತೆ ತಡೆಯಲು ಸಂಚಾರ ಮಾರ್ಗದಲ್ಲಿ ಪೊಲೀಸರು ಬದಲಾವಣೆ ಮಾಡಿದ್ದಾರೆ.

'ಬಿಎಚ್‌ಇಎಲ್ ವೃತ್ತ/ಐಐಎಸ್ಸಿ ವೃತ್ತದಿಂದ ಕಂಟೋನ್ಮೆಂಟ್ ರೈಲು ನಿಲ್ದಾಣವರೆಗೆ, ಹೆಬ್ಬಾಳ ಜಂಕ್ಷನ್ ಹಾಗೂ ಕಾವೇರಿ ಸಿನಿಮಂದಿರದಿಂದ ಬಸವೇಶ್ವರ ವೃತ್ತದವರೆಗೆ (ಚಾಲುಕ್ಯ ವೃತ್ತ) ಬೆಳಿಗ್ಗೆ 7 ಗಂಟೆಯಿಂದ ಮಧ್ಯಾಹ್ನ 12 ಗಂಟೆ ಹಾಗೂ ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 10 ಗಂಟೆವರೆಗೆ ಭಾರಿ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ' ಎಂದು ಸಂಚಾರ ವಿಭಾಗದ ಜಂಟಿ ಕಮಿಷನರ್ ಎಂ.ಎನ್. ಅನುಚೇತ್ ‘ಪ್ರಜಾವಾಣಿ’ಗೆ ತಿಳಿಸಿದರು.

'ಅರಮನೆ ರಸ್ತೆ, ವಸಂತನಗರ ರಸ್ತೆ, ನಂದಿದುರ್ಗ ರಸ್ತೆ, ಎಂ.ವಿ.ಜಯರಾಮ್ ರಸ್ತೆ, ಜಯಮಹಲ್ ರಸ್ತೆ, ಬಳ್ಳಾರಿ ರಸ್ತೆ, ಸಿ.ವಿ. ರಾಮನ್ ರಸ್ತೆ, ರಮಣ ಮಹರ್ಷಿ ರಸ್ತೆ, ತರಳಬಾಳು ರಸ್ತೆ ಹಾಗೂ‌ ಮೌಂಟ್ ಕಾರ್ಮೆಲ್ ರಸ್ತೆಯಲ್ಲಿ ವಾಹನ ನಿಲುಗಡೆ ನಿರ್ಬಂಧಿಸಲಾಗಿದೆ. ಯಾರಾದರೂ ವಾಹನಗಳನ್ನು ನಿಲ್ಲಿಸಿದರೆ ದಂಡ ವಿಧಿಸಲಾಗುವುದು. ವಾಹನಗಳ ನಿಲುಗಡೆ ತೆರವು ಮಾಡಲು ಸಿಬ್ಬಂದಿ ಗಸ್ತು ತಿರುಗಲಿದ್ದಾರೆ' ಎಂದು ಹೇಳಿದರು.

ಬದಲಿ‌ ಮಾರ್ಗ ಬಳಸಲು ಕೋರಿಕೆ: ‘ಅರಮನೆ ಮೈದಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಲಿದ್ದಾರೆ. ಮೈದಾನ ಸುತ್ತಮುತ್ತಲಿನ ಅರಮನೆ ರಸ್ತೆ (ಮೈಸೂರು ಬ್ಯಾಂಕ್‌ ವೃತ್ತದಿಂದ ವಸಂತನಗರ ಕೆಳಸೇತುವೆ), ಎಂ.ವಿ. ಜಯರಾಮ್ ರಸ್ತೆ (ಬಿಡಿಎ ಜಂಕ್ಷನ್‌ನಿಂದ ಚಕ್ರವರ್ತಿ ಲೇಔಟ್), ಬಳ್ಳಾರಿ ರಸ್ತೆ (ಮೇಖ್ರಿ ವೃತ್ತದಿಂದ ಎಲ್‌ಆರ್‌ಡಿಇ ಜಂಕ್ಷನ್), ಕನ್ನಿಂಗ್‌ಹ್ಯಾಮ್ ರಸ್ತೆ, ಮಿಲ್ಲರ್ಸ್ ವೃತ್ತ, ಜಯಮಹಲ್ ರಸ್ತೆಗಳಲ್ಲಿ ದಟ್ಟಣೆ ಸಾಧ್ಯತೆ ಇದೆ. ಈ ರಸ್ತೆ ಬದಲು ಬೇರೆ ಮಾರ್ಗದಲ್ಲಿ‌ ಸಾರ್ವಜನಿಕರು ಸಂಚರಿಸಬೇಕು' ಎಂದು ಅನುಚೇತ್ ತಿಳಿಸಿದರು.

ಬಿಗಿ ಭದ್ರತೆ: ಕಂಬಳ ನಡೆಯುವ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT