ಬೆಂಗಳೂರು: ನಗರದ ಮತ್ತಷ್ಟು ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಈ ಬಗ್ಗೆ ಆಡಳಿತ ಮಂಡಳಿಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ನಗರದ ಆರು ಶಾಲೆಗಳಿಗೆ ಇ–ಮೇಲ್ ಸಂದೇಶ ಕಳುಹಿಸಿದ್ದ ಅಪರಿಚಿತರು, ಬಾಂಬ್ ಬೆದರಿಕೆ ಹಾಕಿದ್ದರು. ಶಾಲೆಗಳಲ್ಲಿ ತಪಾಸಣೆ ನಡೆಸಿದ್ದ ಪೊಲೀಸರು, ಹುಸಿ ಸಂದೇಶವೆಂದು ಘೋಷಿಸಿದ್ದರು. ಆರು ಶಾಲೆಗಳ ಆಡಳಿತ ಮಂಡಳಿಯವರಿಂದ ದೂರು ಪಡೆದು ಪ್ರಕರಣ ದಾಖಲಿಸಿಕೊಂಡಿದ್ದರು.

ಇದೀಗ ಮತ್ತಷ್ಟು ಶಾಲೆಗಳ ಆಡಳಿತ ಮಂಡಳಿಯವರು ಪೊಲೀಸರನ್ನು ಸಂಪರ್ಕಿಸಿ ದೂರು ನೀಡುತ್ತಿದ್ದಾರೆ. ಎಲ್ಲ ದೂರುಗಳನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರ ವಿಶೇಷ ತಂಡ, ಆರೋಪಿಗಳ ಪತ್ತೆಗೆ ತನಿಖೆ ಮುಂದುವರಿಸಿದೆ.

‘ಇದುವರೆಗೂ 22 ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿರುವ ಮಾಹಿತಿ ಲಭ್ಯವಾಗಿದೆ. ಇದರಲ್ಲಿ, ಬಿಷಪ್ ಕಾಟನ್ ಶಾಲೆಯೂ ಇದೆ. ಎಲ್ಲ ಶಾಲೆಗಳಲ್ಲಿ ತಪಾಸಣೆ ನಡೆಸಲಾಗಿದ್ದು, ಯಾವುದೇ ಸ್ಫೋಟಕಗಳು ಪತ್ತೆಯಾಗಿಲ್ಲ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.