ಬೆಂಗಳೂರು: ಅನಧಿಕೃತ ನಿರ್ಮಾಣಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಮುಂದುವರಿಸಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ), ಶುಕ್ರವಾರ ಕೆಂಗೇರಿ ಉಪನಗರದಲ್ಲಿ ₹50 ಕೋಟಿ ಆಸ್ತಿ ವಶಪಡಿಸಿಕೊಂಡಿದೆ.

ಕೆಂಗೇರಿ ಉಪನಗರ ಬಡಾವಣೆಯ ನಿವೇಶನ ಸಂಖ್ಯೆ 2040, 2041, 2043, 2049, 2096, 2098, 2099, 2100, 2101, 2152, 2142, 2143, 2135, 2103/23 ಮತ್ತು 2167ರಲ್ಲಿ ಅನಧಿಕೃವಾಗಿ ನಿರ್ಮಾಣವಾಗಿದ್ದ ಗ್ಯಾರೆಜ್, ತಗಡಿನ ಶೀಟ್ ಮನೆಗಳು, ಅಂಗಡಿ ಮಳಿಗೆ, ಶೆಡ್ ಮತ್ತು ಕಾಂಪೌಂಡ್ ಗೋಡೆಗಳನ್ನು ಜೆಸಿಬಿ ಮೂಲಕ ತೆರವುಗೊಳಿಸಿ, 3,7000 ಚದರ ಅಡಿ ವಿಸ್ತೀರ್ಣದ ಸುಮಾರು ₹50 ಕೋಟಿ ಬೆಲೆ ಬಾಳುವ ಪ್ರದೇಶವನ್ನು ವಶಪಡಿಸಿಕೊಳ್ಳಲಾಗಿದೆ.

ಈ ಜಾಗದ ಸುತ್ತಲೂ ಬೇಲಿ ಹಾಕಿ, ಎಚ್ಚರಿಕೆ ಫಲಕ ಅಳವಡಿಸಲಾಗಿದೆ.

ಪ್ರಾಧಿಕಾರದ ಕಾರ್ಯನಿರತ ಪಡೆಯ ಆರಕ್ಷಕ ಅಧೀಕ್ಷಕ, ನಾಡಪ್ರಭು ಕೆಂಪೇಗೌಡ ಬಡಾವಣೆಯ ಕಾರ್ಯಪಾಲಕ ಎಂಜಿನಿಯರ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಹಾಗೂ ಸ್ಥಳೀಯ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.