ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ) ದೇಶದ ಎರಡನೇ ಪ್ರಯಾಣಿಕರ ದಟ್ಟಣೆವುಳ್ಳ ವಿಮಾನ ನಿಲ್ದಾಣವೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಹಿಂದಿಕ್ಕಿದೆ. ದೆಹಲಿ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಮೊದಲ ಸ್ಥಾನದಲ್ಲಿದೆ.

ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ಬಿಡುಗಡೆ ಮಾಡಿದ ಏಪ್ರಿಲ್ ತಿಂಗಳ ಅಂಕಿ-ಅಂಶದ ಪ್ರಕಾರ, ಕೆಐಎ ಮೂಲಕ ಒಟ್ಟು 31,78,826 ದೇಶಿ ಪ್ರಯಾಣಿಕರು ಹಾರಾಟ ನಡೆಸಿದ್ದಾರೆ. ಮುಂಬೈ ವಿಮಾನ ನಿಲ್ದಾಣದ ಮೂಲಕ 28,93,286 ಮಂದಿ ಪ್ರಯಾಣಿಸಿದ್ದಾರೆ. ಮೊದಲ ಸ್ಥಾನದಲ್ಲಿರುವ ದೆಹಲಿ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ 49,29,982 ಪ್ರಯಾಣಿಕರು ಪ್ರಯಾಣಿಸಿದ್ದಾರೆ.

ನವಿ ಮುಂಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಕಾರ್ಯಾರಂಭವಾದ ಬಳಿಕ ಸಂಚಾರದ ಒಂದು ಭಾಗ ಅಲ್ಲಿಗೆ ವರ್ಗಾವಣೆಯಾಗಿರುವುದರಿಂದ ಛತ್ರಪತಿ ಶಿವಾಜಿ ವಿಮಾನ ನಿಲ್ದಾಣದ ಸ್ಥಾನ ಕುಸಿಯಲು ಕಾರಣ ಎಂದು ತಿಳಿದುಬಂದಿದೆ. ನವಿ ಮುಂಬೈ ವಿಮಾನ ನಿಲ್ದಾಣ ಏಪ್ರಿಲ್ನಲ್ಲಿ 5,24,594 ಪ್ರಯಾಣಿಕರನ್ನು ನಿರ್ವಹಿಸಿದೆ.

ಮುಂಬಯಿ ಮೂಲಕ 11,53,949 ಹಾಗೂ ಕೆಐಎ ಮೂಲಕ 5,06,309 ಅಂತರರಾಷ್ಟ್ರೀಯ ಪ್ರಯಾಣಿಕರು ಸಂಚರಿಸಿದ್ದಾರೆ. 17,22,208 ಪ್ರಯಾಣಿಕರೊಂದಿಗೆ ದೆಹಲಿ ಅಗ್ರಸ್ಥಾನದಲ್ಲಿದೆ. 2026ರ ಏಪ್ರಿಲ್ ವೇಳೆಗೆ ಒಟ್ಟು 40 ಕೋಟಿ ಪ್ರಯಾಣಿಕರ ಸಂಚಾರದ ಐತಿಹಾಸಿಕ ಮೈಲುಗಲ್ಲು ದಾಟಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-4-553046791

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.