ಬೆಂಗಳೂರು: ಕೋಗಿಲು ಲೇಔಟ್ನಲ್ಲಿ ಶೆಡ್ಗಳ ತೆರವು ಕಾರ್ಯಾಚರಣೆಯಿಂದ ಸಂತ್ರಸ್ತರಾದ ಎಲ್ಲ ಕುಟುಂಬಗಳಿಗೆ ಎರಡು ವಾರಗಳಲ್ಲಿ ಪುನರ್ವಸತಿ ಕಲ್ಪಿಸಬೇಕು. ಇಲ್ಲದಿದ್ದರೆ ಸ್ವಾತಂತ್ರ್ಯ ಉದ್ಯಾನದಲ್ಲಿ ಅನಿರ್ದಿಷ್ಟಾವಧಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ಕೋಗಿಲು ಲೇಔಟ್ ಸ್ಲಂ ನಿವಾಸಿಗಳ ಹೋರಾಟ ಸಮಿತಿ ಎಚ್ಚರಿಕೆ ನೀಡಿದೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಸದಸ್ಯರಾದ ಪೂಜಾ, ಗೌರಮ್ಮ, ‘ಕೋಗಿಲು ಬಡಾವಣೆಯ ಫಕೀರ್ ಕಾಲೊನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರದಲ್ಲಿ (ವಸೀಮ್ ಲೇಔಟ್) 156 ಮುಸ್ಲಿಂ, 31 ಹಿಂದೂ ಕುಟುಂಬ ಹಾಗೂ ಕ್ರೈಸ್ತ ಕುಟುಂಬವೊಂದು ನೆಲಸಿದ್ದವು. ಕೇವಲ ನಾಲ್ಕು ಗಂಟೆಯೊಳಗೆ ಇವರ ಮನೆಗಳನ್ನು ನೆಲಸಮ ಮಾಡಲಾಗಿದೆ. 128 ದಿನಗಳಿಂದ ಈ ಸಂತ್ರಸ್ತರು ಬೀದಿಯಲ್ಲಿಯೇ ಜೀವನ ನಡೆಸುತ್ತಿದ್ದಾರೆ’ ಎಂದು ದೂರಿದರು.

‘ರಾಜೀವ್ ಗಾಂಧಿ ವಸತಿ ನಿಗಮ ಹಾಗೂ ಜಿಬಿಎ ಸತತವಾಗಿ ನಡೆಸಿದ ಸಮೀಕ್ಷೆಯಲ್ಲಿ ದಾಖಲೆಗಳನ್ನು ಪರಿಶೀಲಿಸುವ ಪ್ರಕ್ರಿಯೆ ಮಾತ್ರ ನಡೆಯುತ್ತಿದೆ. ಆದರೆ ಸಂತ್ರಸ್ತರಿಗೆ ಮನೆ ನೀಡುವ ಯಾವುದೇ ಸೂಚನೆಗಳು ಕಾಣಿಸುತ್ತಿಲ್ಲ. ಸಿದ್ಧರಾಮಯ್ಯ ಅವರು ಘೋಷಿಸಿರುವಂತೆ ಎಲ್ಲ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಬೇಕು’ ಎಂದು ಆಗ್ರಹಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-4-1573725238

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.