ಬೆಂಗಳೂರು: ಸಾರಕ್ಕಿ ಸಮೀಪದ ಸಂಗಮ್ ವೃತ್ತದ ಬಳಿ ರಸ್ತೆಬದಿಯ ಮರಕ್ಕೆ ನೇಣುಹಾಕಿಕೊಂಡು ರಂಗಭೂಮಿ ಕಲಾವಿದ, ಕೋಲಾರದ ಮುರುಳಿ (32) ಅವರು ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಳಿಗ್ಗೆ 7ರ ಸುಮಾರಿಗೆ ಸಾರ್ವಜನಿಕರು ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ತೆರಳಿ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಯಿತು. ಮುರುಳಿ ಪೋಷಕರು ನೀಡಿದ ದೂರಿನ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.

ರಂಗಭೂಮಿಯ ತಾಂತ್ರಿಕ ವಿಭಾಗದಲ್ಲಿ ಮುರುಳಿ ಕೆಲಸ ಮಾಡುತ್ತಿದ್ದರು. ಜತೆಗೆ ಕಿರುಚಿತ್ರಗಳಲ್ಲೂ ನಟಿಸಿದ್ದರು. ಗಿರಿನಗರದಲ್ಲಿ ವಾಸವಾಗಿದ್ದರು ಎಂದು ಮೂಲಗಳು ಹೇಳಿವೆ.

ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ವೈಯಕ್ತಿಕ ಕಾರಣ ಇರಬಹುದು ಎಂಬುದಾಗಿ ಶಂಕಿಸಲಾಗಿದೆ ಎಂದು ಪೊಲೀಸರು ಹೇಳಿದರು.

‘ಆತ್ಮಹತ್ಯೆಗೂ ಕೆಲವು ತಾಸು ಮೊದಲು ಮುರುಳಿ ಅವರು, ‘ನಾನು ಸರಿಯಾಗಿ ಏನನ್ನೂ ಮಾಡಲು ಸಾಧ್ಯವಾಗಲಿಲ್ಲ. ಮುಂದಿನ ಜನ್ಮದಲ್ಲಿ ಮತ್ತೆ ನಿಮ್ಮ ಹೊಟ್ಟೆಯಲ್ಲಿ ಹುಟ್ಟುತ್ತೇನೆ’ ಎಂಬುದಾಗಿ ಪೋಷಕರಿಗೆ ವಾಟ್ಸ್ಆ್ಯಪ್ ಸಂದೇಶ ಕಳುಹಿಸಿದ್ದರು’ ಎಂದು ಪೊಲೀಸರು ಹೇಳಿದರು.

ಜೆ.ಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260409-18-1483960768

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.