ಶುಕ್ರವಾರ, ಜನವರಿ 27, 2023
26 °C

ಕೆ.ಆರ್.ಪುರ: ರಸ್ತೆ ಗುಂಡಿ ಮುಚ್ಚಲು ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೆ.ಆರ್.ಪುರ: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ವಾಹನ ಸವಾರರಿಗೆ ಮೃತ್ಯುಕೂಪವಾಗಿರುವ ರಸ್ತೆಯ ಗುಂಡಿಗಳನ್ನು ಮುಚ್ಚುವಂತೆ ಆಗ್ರಹಿಸಿ ಆಮ್ ಆದ್ಮಿ ಪಕ್ಷದಿಂದ ಪ್ರತಿಭಟನೆ ನಡೆಯಿತು.

ಪದೇ ಪದೇ ಅಪಘಾತಗಳು ನಡೆದರೂ ಬಿಬಿಎಂಪಿ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಎಚ್ಚೆತ್ತುಕೊಂಡಿಲ್ಲ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಇನ್ನೆಷ್ಟು ಜೀವ ಬಲಿಯಾಗಬೇಕಿದೆ ಎಂದು ಆಮ್ ಆದ್ಮಿ ಪಕ್ಷದ ಮುಖಂಡ ದಿಲೀಪ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

ಕೆ.ಆರ್.ಪುರ ಬಿಬಿಎಂಪಿ ಬಳಿಯ ರಾಷ್ಟ್ರೀಯ ಹೆದ್ದಾರಿಯಿಂದ ಭಟ್ಟರಹಳ್ಳಿ ತನಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಂಡಿಗಳು ಬಿದ್ದು ಸಂಪೂರ್ಣ ಹದಗೆಟ್ಟಿದೆ. ರಾಷ್ಟ್ರೀಯ ಹೆದ್ದಾರಿಯು ನಗರದಿಂದ ತಮಿಳುನಾಡು, ಆಂಧ್ರಪ್ರದೇಶ, ರಾಜ್ಯದ ಕೋಲಾರ, ಚಿಕ್ಕಬಳ್ಳಾಪುರ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯಾಗಿದೆ. ದಿನಕ್ಕೆ ಎರಡು ಲಕ್ಷಕ್ಕೂ ಅಧಿಕ ವಾಹನಗಳು ಈ ರಸ್ತೆಯ ಮೂಲಕ ಸಂಚಾರ ನಡೆಸುತ್ತವೆ. ಇಂತಹ ಗುಂಡಿಗಳು ಬಿದ್ದಿದ್ದು, ಗುಂಡಿಗಳು ತಪ್ಪಿಸಲು ಹೋಗಿ ಅಪಘಾತಗಳು ಸಂಭವಿಸಿ, ಕೆಲವರು ಪ್ರಾಣ ಕಳೆದುಕೊಂಡಿದ್ದಾರೆ.
ಇಷ್ಟಾದರೂ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸದೇ ನಿರ್ಲಕ್ಷ್ಯ ತೋರಿದ್ದಾರೆ ಎಂದು ಅವರು ಆರೋಪಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು