ಮಂಗಳವಾರ, 25 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೆ.ಆರ್.ಪುರ: ರಸ್ತೆ ಗುಂಡಿ ಮುಚ್ಚುವಂತೆ ಆಗ್ರಹಿಸಿ ಪ್ರತಿಭಟನೆ

Published 30 ಮೇ 2024, 16:26 IST
Last Updated 30 ಮೇ 2024, 16:26 IST
ಅಕ್ಷರ ಗಾತ್ರ

ಕೆ.ಆರ್.ಪುರ: ಕ್ಷೇತ್ರ ವ್ಯಾಪ್ತಿಯಲ್ಲಿರುವ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಕುಮಾರ್ ಶೆಟ್ಟಿ ಬಣದ ಕಾರ್ಯಕರ್ತರು ಕೆ.ಆರ್ ಪುರದ ಬಿಬಿಎಂಪಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಬಸವನಪುರ, ದೇವಸಂದ್ರ, ರಾಮಮೂರ್ತಿನಗರ, ಭಟ್ಟರಹಳ್ಳಿ ಸೇರಿದಂತೆ ಪ್ರಮುಖ ಮುಖ್ಯರಸ್ತೆಯಲ್ಲಿ ಗುಂಡಿಗಳು ಬಿದ್ದು ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟಿದೆ. ಸಾವಿರಾರು ವಾಹನ ಸಂಚರಿಸುವ ಮುಖ್ಯರಸ್ತೆಗಳಲ್ಲಿ ನೂರಾರು ಗುಂಡಿಗಳಾಗಿವೆ. ವಾಹನ ಸವಾರರು ಗುಂಡಿ ತಪ್ಪಿಸುವ ಭರದಲ್ಲಿ ಅಪಘಾತಗಳು ಸಂಭವಿಸುತ್ತಿವೆ ಪ್ರತಿಭಟನಾಕಾರರು ದೂರಿದರು.

ರಸ್ತೆ ಗುಂಡಿಗಳಿಂದಾಗಿ ಅನೇಕರು ಆಸ್ಪತ್ರೆ ಸೇರುತ್ತಿದ್ದಾರೆ. ಅಲ್ಲದೆ ವಿಪರೀತ ಸಂಚಾರ ದಟ್ಟಣೆ ಉಂಟಾಗುತ್ತಿದೆ. ನಗರದಲ್ಲಿ ಗುಂಡಿ ಮುಚ್ಚಲು ಸರ್ಕಾರ ಅನುದಾನ ಒದಗಿಸಿದೆ. ಆದರೆ ಬಿಬಿಎಂಪಿ ಅಧಿಕಾರಿಗಳು ಗುಂಡಿ ಮುಚ್ಚುವ ಕೆಲಸ ಮಾಡದೇ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ದೂರಿದರು.

‘ಪ್ರಮುಖ ರಸ್ತೆಗಳಲ್ಲಾಗಿರುವ ಗುಂಡಿಗಳಿಂದ ಜನಸಾಮಾನ್ಯರಿಗೆ ತುಂಬಾ ತೊಂದರೆ ಆಗುತ್ತಿದೆ. ಕೂಡಲೇ ಬಿಬಿಎಂಪಿ ಅಧಿಕಾರಿಗಳು ಹದಗೆಟ್ಟಿರುವ ರಸ್ತೆಗಳನ್ನು ದುರಸ್ತಿಗೊಳಿಸಬೇಕು‘ ಎಂದು ಕೆ.ಆರ್.ಪುರ ಕ್ಷೇತ್ರ ಕರವೇ ಅಧ್ಯಕ್ಷ ಕೃಷ್ಣಮೂರ್ತಿ ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಚಂದ್ರು, ಪುಷ್ಪ, ವಿನಯ್, ಗುರುವ್ ರೆಡ್ಡಿ, ಅಶೋಕ್,ಇರ್ಫಾನ್, ಮಲ್ಲಪ್ಪ, ಲಕ್ಷ್ಮೀನಾರಾಯಣ, ಪುರುಷೋತ್ತಮ, ರವಿಚಂದ್ರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT