ಬೆಂಗಳೂರು: ನಗರದ ಲಾಲ್ಬಾಗ್ನ ಕೆರೆಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದ್ದು, ಆತ್ಮಹತ್ಯೆಯ ಶಂಕೆ ವ್ಯಕ್ತವಾಗಿದೆ.

ಶನಿವಾರ ಬೆಳಿಗ್ಗೆ 6.30ರ ಸುಮಾರಿಗೆ ವಾಯುವಿಹಾರಕ್ಕೆ ತೆರಳಿದ್ದವರು, ಕೆರೆಯಲ್ಲಿ ಮೃತದೇಹ ಇರುವುದನ್ನು ಗಮನಿಸಿ ಮಾಹಿತಿ ನೀಡಿದ್ದರು. ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ, ಮೃತದೇಹವನ್ನು ಮೇಲಕ್ಕೆ ತರಲಾಯಿತು. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯ ವಯಸ್ಸು 45 ವರ್ಷವೆಂದು ಅಂದಾಜಿಸಲಾಗಿದೆ. ಗುರುತು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದರು.

‘ಮಹಿಳೆಯ ದೇಹದ ಮೇಲೆ ಚಿಕಿತ್ಸೆ ಪಡೆಯುತ್ತಿದ್ದ ಗುರುತುಗಳು ಪತ್ತೆಯಾಗಿವೆ. ಆಸ್ಪತ್ರೆಯಿಂದ ತಪ್ಪಿಸಿಕೊಂಡು ಬಂದು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಂತೆ ಕಾಣಿಸುತ್ತಿದೆ. ತನಿಖೆ ಮುಂದುವರೆಸಲಾಗಿದೆ’ ಎಂದು ಪೊಲೀಸರು ಹೇಳಿದರು. ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.