ಬೆಂಗಳೂರು: ಮಹಾತ್ಮ ಗಾಂಧಿ ರಸ್ತೆಯ ಅನಿಲ್ ಕುಂಬ್ಳೆ ವೃತ್ತದ ಬಳಿ ಶನಿವಾರ ಮುಂಜಾನೆ, ಅಪಾಯಕಾರಿಯಾಗಿ ಚಾಲನೆ ಮಾಡಿದ ಲ್ಯಾಂಬೋರ್ಗಿನಿ ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.

ಲ್ಯಾಂಬೋರ್ಗಿನಿ ಕಾರನ್ನು ಅನಿಲ್ ಕುಂಬ್ಳೆ ವೃತ್ತದ ಬಳಿ ಅಪಾಯಕಾರಿ ರೀತಿಯಲ್ಲಿ ಚಾಲನೆ ಮಾಡಲಾಗಿದೆ. ಇದನ್ನು ಸ್ಥಳೀಯರು ಮೊಬೈಲ್ನಲ್ಲಿ ಚಿತ್ರೀಕರಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು. ಮಾಹಿತಿ ಆಧರಿಸಿ ಕಬ್ಬನ್ ಪಾರ್ಕ್ ಸಂಚಾರ ಠಾಣೆಯ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಿ.ಸಿ ಟಿ.ವಿ ಕ್ಯಾಮೆರಾ ದೃಶ್ಯಾವಳಿಗಳ ಪರಿಶೀಲನೆ ವೇಳೆ ಕೆಎ–05 ಎನ್ಆರ್ 0009 ನಂಬರ್ನ ಲ್ಯಾಂಬೋರ್ಗಿನಿ ಕಾರು ಎಂಬುದು ಗೊತ್ತಾಗಿದೆ. ಕಾರಿನ ಮಾಲೀಕರನ್ನು ಪತ್ತೆ ಮಾಡಲಾಗುತ್ತಿದ್ದು, ಅಜಾಗರೂಕತೆ ಹಾಗೂ ಅಪಾಯಕಾರಿ ಚಾಲನೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಬೆಳಗಿನ ಜಾವ 2ರಿಂದ 3ಗಂಟೆ ಸುಮಾರಿಗೆ ಕಾರನ್ನು ಅಪಾಯಕಾರಿ ರೀತಿಯಲ್ಲಿ ಚಾಲನೆ ಮಾಡಲಾಗಿದೆ. ಈ ಪ್ರಕರಣದ ಸಂಬಂಧ ಆರ್.ಸಿ ರದ್ದು ಮಾಡಲು ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಪತ್ರ ಬರೆದು ಶಿಫಾರಸು ಮಾಡಲಾಗುವುದು ಎಂದು ಪಶ್ಚಿಮ ವಿಭಾಗದ (ಸಂಚಾರ) ಡಿಸಿಪಿ ಸಾಹಿಲ್ ಬಾಗ್ಲಾ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.