ಬೆಂಗಳೂರು: ‘ಪರವಾನಗಿ ಪಡೆದ ಭೂಮಾಪಕರನ್ನು ವಿಶೇಷ ನೇಮಕಾತಿ ಮೂಲಕ ಸರ್ಕಾರಿ ಹುದ್ದೆಯಲ್ಲಿ ವಿಲೀನಗೊಳಿಸಿ, ಸಮಾನ ಕೆಲಸಕ್ಕೆ ಸಮಾನ ವೇತನ ಒದಗಿಸಬೇಕು’ ಎಂದು ಅಖಿಲ ಕರ್ನಾಟಕ ಸರ್ಕಾರಿ ಪರವಾನಗಿ ಭೂ ಮಾಪಕರ ಸಂಘವು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದೆ.

ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಗೌರವಾಧ್ಯಕ್ಷ ಕೆ.ಪಿ. ಭಾರ್ಗವಲು,‘ರಾಜ್ಯದಲ್ಲಿ ಪರವಾನಗಿ ಹೊಂದಿದ ಐದು ಸಾವಿರಕ್ಕೂ ಅಧಿಕ ಭೂಮಾಪಕರಿದ್ದು, ಕಳೆದ 23 ವರ್ಷಗಳಿಂದ ಕನಿಷ್ಠ ವೇತನಕ್ಕೆ ದುಡಿಯುತ್ತಿದ್ದಾರೆ. ಸರ್ಕಾರಿ ಸೇವೆಗಳಾದ ವಿಭಾಗ ಪತ್ರ, ದಾನ, ಕ್ರಯಕ್ಕೆ ಇ–ನಕ್ಷೆ ತಯಾರಿ ಸೇರಿ ವಿವಿಧ ಕೆಲಸ ಮಾಡುತ್ತಿದ್ದಾರೆ. ಇದಕ್ಕೆ ಸರ್ಕಾರ ಕನಿಷ್ಠ ಸಂಭಾವನೆ ನಿಗದಿಪಡಿಸಿದ್ದು, ಬದುಕು ಕಷ್ಟಕರವಾಗಿದೆ. ಆದ್ದರಿಂದ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಭೂಮಾಪಕರನ್ನು ವಿಶೇಷ ನೇಮಕಾತಿ ಮೂಲಕ ಸರ್ಕಾರಿ ಹುದ್ದೆಯಲ್ಲಿ ವಿಲೀನ ಗೊಳಿಸಬೇಕು’ ಎಂದು ಆಗ್ರಹಿಸಿದರು.

‘ಪರವಾನಗಿ ಪಡೆದ ಭೂ ಮಾಪಕರನ್ನು ಕೆ.ಎಲ್.ಆರ್. ಕಾಯ್ದೆ 46ರ ತಿದ್ದುಪಡಿಯಂತೆ ಸರ್ಕಾರಿ ಹುದ್ದೆ ಯಲ್ಲಿ ವಿಲೀನಗೊಳಿಸಲು ಅವಕಾಶವಿದೆ. ಈ ಬಗ್ಗೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಆದರೆ, ಈವರೆಗೆ ಯಾವುದಕ್ಕೂ ಸರಿಯಾದ ಸ್ಪಂದನೆ ಸಿಕ್ಕಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.

‘ಸರ್ಕಾರಿ ಹುದ್ದೆಯಲ್ಲಿ ವಿಲೀನ ಗೊಳಿಸಲು ಸಾಧ್ಯವಾಗದಿದ್ದರೆ, ಸರ್ಕಾರಿ ಭೂಮಾಪಕರಂತೆಯೇ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ಸರ್ಕಾರ ಈ ಬಗ್ಗೆ ಶೀಘ್ರ ತೀರ್ಮಾನ ಕೈಗೊಳ್ಳಬೇಕು. ಇಲ್ಲವಾದಲ್ಲಿ ರಾಜ್ಯದಾದ್ಯಂತ ಮುಷ್ಕರ ನಡೆಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-14-2074416383

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.