ಬೆಂಗಳೂರು: ರಾಜಗೋಪಾಲನಗರ ಠಾಣಾ ವ್ಯಾಪ್ತಿಯ ಶ್ರೀಗಂಧನಗರದ ಬಾಡಿಗೆ ಮನೆಯಲ್ಲಿ ನೆಲಸಿದ್ದ ಯುವಕ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಚಿತ್ರದುರ್ಗ ತಿಪ್ಪೇಸ್ವಾಮಿ (28) ಆತ್ಮಹತ್ಯೆ ಮಾಡಿಕೊಂಡ ಯುವಕ. ಪತಿ ಹಾಗೂ ಮಕ್ಕಳಿಂದ ದೂರವಾಗಿದ್ದ ಮಹಿಳೆಯೊಂದಿಗೆ ಯುವಕ ಸಹಜೀವನ ನಡೆಸುತ್ತಿದ್ದರು. ಮಹಿಳೆಗೆ ‘ರೀಲ್ಸ್’ ಮಾಡುವ ಹವ್ಯಾಸವಿತ್ತು. ಇಬ್ಬರೂ ಒಂದೇ ಗಾರ್ಮೆಂಟ್ಸ್ನಲ್ಲಿ ಕೆಲಸ ಮಾಡುತ್ತಿದ್ದರು. ಮನೆ ಮಾಲೀಕರಿಗೆ ದಂಪತಿ ಎಂಬುದಾಗಿ ಸುಳ್ಳು ಹೇಳಿಕೊಂಡು ಬಾಡಿಗೆ ಮನೆ ಪಡೆದುಕೊಂಡಿದ್ದರು ಎಂದು ಮೂಲಗಳು ಹೇಳಿವೆ.

‘ನನ್ನನ್ನು ನೋಡಿಕೊಳ್ಳಲು ಆಗುವುದಿಲ್ಲ. ಬಿಟ್ಟು ಹೋಗು ಎಂಬುದಾಗಿ ಮಹಿಳೆ, ತಿಪ್ಪೇಸ್ವಾಮಿಗೆ ಹೇಳುತ್ತಿದ್ದರು. ಅದೇ ಕಾರಣಕ್ಕೆ ನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ತನಿಖೆ ನಡೆಯುತ್ತಿದೆ’ ಎಂದು ಪೊಲೀಸರು ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-16-101723255

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.