ಬೆಂಗಳೂರು: ಮಾದನಾಯಕಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮಾಚೋಹಳ್ಳಿ ಬಳಿ ಬಲೆರೊ ಪಿಕ್ಅಪ್ ವಾಹನ ಹಾಗೂ ಕಾರಿನ ನಡುವೆ ಭಾನುವಾರ ತಡರಾತ್ರಿ ಸಂಭವಿಸಿದ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಹಾಸನ ಜಿಲ್ಲೆ, ಚನ್ನರಾಯಪಟ್ಟಣದ ಗಗನ್ (27) ಹಾಗೂ ಅವರ ಸ್ನೇಹಿತ, ಹೊಳೆನರಸೀಪುರದ ನಿವಾಸಿ ದರ್ಶನ್ (26) ಮೃತಪಟ್ಟವರು.

ಕಾರಿನಲ್ಲಿದ್ದ ಮತ್ತೊಬ್ಬ ಸ್ನೇಹಿತ ಸಿದ್ದೇಶ್ ಅವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದರು.

ಮೂವರು ಎಲೆಕ್ಟ್ರಾನಿಕ್ಸಿಟಿ ಬಳಿಯಿರುವ ಸ್ನೇಹಿತನ ಮನೆಗೆ ತೆರಳುತ್ತಿದ್ದಾಗ ಭಾನುವಾರ ತಡರಾತ್ರಿ ಈ ದುರ್ಘಟನೆ ನಡೆದಿದೆ.

ಮಾದನಾಯಕನಹಳ್ಳಿಯ ಬಾರ್ನಲ್ಲಿ ಗಗನ್ ಅವರು ಕೆಲಸ ಮಾಡುತ್ತಿದ್ದರು. ಕೋಳಿ ಸಾಗಣೆ ವಾಹನದ ಚಾಲಕರಾಗಿ ದರ್ಶನ್ ಅವರು ಕೆಲಸ ಮಾಡುತ್ತಿದ್ದರು.

ಗಗನ್ ಅವರು ಕಾರು ಚಾಲನೆ ಮಾಡುತ್ತಿದ್ದರು. ರಸ್ತೆಬದಿಯಲ್ಲಿ ನಿಂತಿದ್ದ ಬಲೆರೊ ವಾಹನಕ್ಕೆ ಹಿಂದಿನಿಂದ ಕಾರು ಡಿಕ್ಕಿಯಾಗಿದೆ. ಪಕ್ಕದ ಸೀಟಿನಲ್ಲಿ ದರ್ಶನ್ ಅವರು ಕುಳಿತಿದ್ದರು. ಕಾರಿನ ಹಿಂದಿನ ಸೀಟಿನಲ್ಲಿ ಸಿದ್ದೇಶ್ ಕುಳಿತಿದ್ದರು. ಗಗನ್ ಹಾಗೂ ದರ್ಶನ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದರು.

ಕಾರು ಚಾಲಕನ ಅಜಾಗರೂಕತೆ ಹಾಗೂ ಅತಿ ವೇಗವೇ ಅಪಘಾತಕ್ಕೆ ಕಾರಣ. ಅಪಘಾತದ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದೆ ಎಂದು ಪೊಲೀಸರು ಹೇಳಿದರು.

ಮರಣೋತ್ತರ ಪರೀಕ್ಷೆ ನಡೆಸಿ, ಮೃತದೇಹಗಳನ್ನು ಕುಟುಂಬದವರಿಗೆ ಹಸ್ತಾಂತರ ಮಾಡಲಾಗಿದೆ.

ಮಾದನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.