ಬೆಂಗಳೂರು: ಪಾರ್ಟಿಗೆ ತೆರಳಿದ್ದ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಮಡಿವಾಳ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕೇರಳದ 20 ವರ್ಷದ ವಿದ್ಯಾರ್ಥಿನಿ ನೀಡಿದ ದೂರಿನ ಮೇಲೆ ಹೈನಾಸ್ ಮತ್ತು ಸುರೇಶ್ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ.

ಆರೋಪಿಗಳ ಪೈಕಿ ಹೈನಾಸ್ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಮೇ 11ರಂದು ತಡರಾತ್ರಿ ಘಟನೆ ನಡೆದಿದೆ ಎಂದು ಪೊಲೀಸರು ಹೇಳಿದರು.

ನಗರದ ಖಾಸಗಿ ಕಾಲೇಜಿನಲ್ಲಿ ಕೇರಳದ ಯುವತಿ ವ್ಯಾಸಂಗ ಮಾಡುತ್ತಿದ್ದಾರೆ. ಬಿಡುವಿನ ವೇಳೆ ಹೋಟೆಲ್ನಲ್ಲಿ ಕೆಲಸ ಮಾಡುತ್ತಿದ್ದರು. ಹೋಟೆಲ್ ಮಾಲೀಕ ಅತುಲ್ ಗೋಶ್ ಅವರು ಮದ್ಯದ ಪಾರ್ಟಿ ಆಯೋಜಿಸಿದ್ದರು. ಮೇ 11ರಂದು ರಾತ್ರಿ ಹೋಟೆಲ್ ಮಾಲೀಕರು, ಯುವತಿ, ಆರೋಪಿ ಸೇರಿ ನಾಲ್ವರು ಪಾರ್ಟಿ ಮಾಡಿದ್ದಾರೆ. ಈ ವೇಳೆ ಊಟ ತರಲು ಸಂತ್ರಸ್ತೆ ಹಾಗೂ ಹೈನಾಸ್ ತೆರಳಿದ್ದರು. ಈ ವೇಳೆ ಸಂತ್ರಸ್ತೆ ಜತೆ ಆರೋಪಿ ಅನುಚಿತವಾಗಿ ವರ್ತಿಸಿದ್ದಾನೆ ಎಂದು ದೂರು ನೀಡಲಾಗಿದೆ.

ಪಾರ್ಟಿ ಸ್ಥಳಕ್ಕೆ ಬಂದ ಮೇಲೆ ಆರೋಪಿ, ಸಂತ್ರಸ್ತೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಸ್ಥಳಕ್ಕೆ ಬಂದ ಹೋಟೆಲ್ ಮಾಲೀಕ ಹಾಗೂ ಇತರರು, ಆರೋಪಿ ಮೇಲೆ ಹಲ್ಲೆ ನಡೆಸಿ ಯುವತಿಯನ್ನು ರಕ್ಷಿಸಿದ್ದಾರೆ. ಅದಕ್ಕೆ ಕೆರಳಿದ್ದ ಆರೋಪಿ ಮದ್ಯದ ಬಾಟಲ್ ಹಿಡಿದು ಕೊಲೆ ಮಾಡುವುದಾಗಿ ಬೆದರಿಸಿದ್ದಾನೆ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಈ ಬಗ್ಗೆ ದೂರು ನೀಡಲು ಹೋದಾಗ ಅತ್ಯಾಚಾರಕ್ಕೆ ಯತ್ನಿಸಿದ್ದ ಹೈನಾಸ್ ಮತ್ತು ಆತನ ನೆರವಿಗೆ ಬಂದ ಸುರೇಶ್, ಹೋಟೆಲ್ ಮಾಲೀಕರು ಹಾಗೂ ಸಂತ್ರಸ್ತೆಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.