ಬೆಂಗಳೂರು: ನಗರದ ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ಮಹಿಳಾ ಸಿಬ್ಬಂದಿ ಮತ್ತು ವಿದ್ಯಾರ್ಥಿನಿಯರ ಮೇಲೆ ಆಗುತ್ತಿರುವ ಮಾನಸಿಕ ಕಿರುಕುಳವನ್ನು ಖಂಡಿಸಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರ ಕ್ಷೇಮಾಭಿವೃದ್ಧಿ ಒಕ್ಕೂಟ ಹಾಗೂ ರಾಷ್ಟ್ರೀಯ ಅಂಬೇಡ್ಕರ್ ಸೇನೆ ವತಿಯಿಂದ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಲಾಯಿತು.

ಮಾನಸಿಕ ಕಿರುಕುಳ ನೀಡುತ್ತಿರುವ ವಿಶ್ವವಿದ್ಯಾಲಯದ ಹಣಕಾಸು ಅಧಿಕಾರಿ ಎಂ.ಎಸ್. ಚೇತನ್ ಕುಮಾರ್ ಅವರನ್ನು ಅಮಾನತುಗೊಳಿಸುವಂತೆ ವಿದ್ಯಾರ್ಥಿನಿಯರು ಹಾಗೂ ಅತಿಥಿ ಉಪನ್ಯಾಸಕರು ಆಗ್ರಹಿಸಿದರು.

‘ಅತಿಥಿ ಉಪನ್ಯಾಸಕಿಯರ ವೈಯಕ್ತಿಕ ವಿಚಾರಗಳ ಬಗ್ಗೆ ಮಾತನಾಡಿ ಮಾನಸಿಕವಾಗಿ ಹಿಂಸಿಸುವುದು, ಮೂರು ತಿಂಗಳಿಂದಲೂ ಸಂಬಳ ನೀಡದೆ ಸತಾಯಿಸುವುದು, ಸಮಸ್ಯೆ ಕೇಳಲು ಹೋದ ಉಪನ್ಯಾಸಕಿ ಹಾಗೂ ವಿದ್ಯಾರ್ಥಿನಿಯರಿಗೆ ದೂರು ನೀಡಿ ಬಂಧಿಸುವಂತೆ ಮಾಡುತ್ತೇನೆ ಎಂದು ಅಧಿಕಾರಿ ಹೆದರಿಸುತ್ತಿದ್ದಾರೆ’ ಎಂದು ಪ್ರತಿಭಟನಕಾರರು ಆರೋಪಿಸಿದರು.

‘ಮಹಿಳಾ ಆಯೋಗ ಮತ್ತು ಕುಲಪತಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಈಗಲಾದರೂ ಸರ್ಕಾರ ಹಾಗೂ ರಾಜ್ಯಪಾಲರು ಮಧ್ಯ ಪ್ರವೇಶಿಸಿ ಸಮಸ್ಯೆ ಇತ್ಯರ್ಥಪಡಿಸಬೇಕು’ ಎಂದು ರಾಷ್ಟ್ರೀಯ ಅಂಬೇಡ್ಕರ್ ಸೇನೆ ಅಧ್ಯಕ್ಷ ಅರ್ಜುನ್ ಗೋಪಾಲಯ್ಯ ಆಗ್ರಹಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-4-2067966441

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.