ಈ ಹಿಂದೆ ಅಂಡಮಾನ್‍ನಲ್ಲಿ ಕೆಲಸ ಮಾಡುತ್ತಿದ್ದ ಸುಮನ್, ಇತ್ತೀಚೆಗಷ್ಟೇ ಬೆಂಗಳೂರಿಗೆ ಬಂದು ಪೋಷಕರೊಂದಿಗೆ ನೆಲಸಿದ್ದ. ಆತ ಮಂದಿರಾ ಅವರನ್ನು ಪ್ರೀತಿಸುತ್ತಿದ್ದ. ಆದರೆ ಆಕೆ ಒಪ್ಪಿರಲಿಲ್ಲ. ಇದೇ ಕಾರಣಕ್ಕೆ ಅವರ ಮಧ್ಯೆ ಜಗಳವಾಗಿ ಆರೋಪಿಯು ಅವರನ್ನು ಕೊಲೆ ಮಾಡಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಬ್ಬಗೋಡಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.