ಬೆಂಗಳೂರು: ತೋಟಗಾರಿಕೆ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ನಿಗಮದ ಸಹಯೋಗದಲ್ಲಿ ಮೇ 8ರಿಂದ 17ರವರೆಗೆ ಕಬ್ಬನ್ ಉದ್ಯಾನದಲ್ಲಿ ಮಾವು, ಹಲಸಿನ ಹಣ್ಣುಗಳ ಪ್ರದರ್ಶನ, ಮಾರಾಟ ಮೇಳ ಆಯೋಜಿಸಲಾಗಿದೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಿಗಮದ ಅಧ್ಯಕ್ಷ ಡಾ.ಬಿ.ಸಿ. ಮುದ್ದು ಗಂಗಾಧರ್, ‘ಸಹಜವಾಗಿ ಮಾಗಿದ ಹಣ್ಣುಗಳನ್ನು ಗ್ರಾಹಕರಿಗೆ ಪೂರೈಸುವ ಉದ್ದೇಶದಿಂದ ಮೇಳ ವನ್ನು ಆಯೋಜಿಸಲಾಗುತ್ತದೆ. ಇಲ್ಲಿ ರೈತರು ಮತ್ತು ಗ್ರಾಹಕರ ನಡುವೆ ನೇರ ಸಂಪರ್ಕಕ್ಕೆ ಅವಕಾಶ ಕಲ್ಪಿಸಲಾಗಿದೆ. ವೈವಿಧ್ಯಮಯ ಮಾವು ಮತ್ತು ಹಲಸಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟಕ್ಕೆ ಅವಕಾಶ ಇದೆ’ ಎಂದು ಹೇಳಿದರು.

‘ಮೇಳದಲ್ಲಿ ರಾಮನಗರ, ಚಿಕ್ಕಬಳ್ಳಾಪುರ, ಉತ್ತರ ಕನ್ನಡ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಮಾವು ಮತ್ತು ಹಲಸು ಬೆಳೆಗಾರರು ಭಾಗವಹಿಸಲಿದ್ದಾರೆ. 40ರಿಂದ 50 ಮಾವಿನ ತಳಿ ಮತ್ತು 10ರಿಂದ 12 ಹಲಸಿನ ತಳಿಗಳನ್ನು ಕಾಣಬಹುದು. ಮಾವು ಬೆಳೆಗಾರರಿಗೆ 50 ಹಾಗೂ ಹಲಸು ಬೆಳೆಗಾರರಿಗೆ 7 ಮಳಿಗೆಗಳನ್ನು ಹಂಚಿಕೆ ಮಾಡಲಾಗಿದೆ’ ಎಂದರು.

‘ಈ ಬಾರಿ ರಾಜ್ಯದಲ್ಲಿ 1.45 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಮಾವು ಬೆಳೆಯಲಾಗಿದೆ. ಹವಾಮಾನ ವೈಪರೀತ್ಯದಿಂದ ಹೂ ಬಿಡುವ ಪ್ರಕ್ರಿಯೆ ತಡ ವಾಗಿದ್ದು, ವಿವಿಧ ಹಂತಗಳಲ್ಲಿ ಮಾವಿನ ಫಸಲು ಬರುವ ಸಾಧ್ಯತೆ ಇದ್ದು, ಮಾರುಕಟ್ಟೆಗೂ ತಡವಾಗಿ ಬರಲಿದೆ. ಹಣ್ಣುಗಳು ಲಭ್ಯವಾಗುವ ಅವಧಿಯೂ ಹೆಚ್ಚಾಗಲಿದೆ’ ಎಂದರು.

ನಿಗಮದ ವ್ಯವಸ್ಥಾಪಕ ನಿರ್ದೇಶಕ ವೇದಮೂರ್ತಿ ಮಾತನಾಡಿ, ‘ಭೌಗೋಳಿಕ ಮಾನ್ಯತೆ(ಜಿಐ) ಪಡೆದಿರುವ ಉತ್ತರ ಕನ್ನಡ ಜಿಲ್ಲೆಯ ಕರಿ ಇಶಾಡ್ ಮಾವು ಮೇಳದಲ್ಲಿ ಇರಲಿದೆ. ಬಾದಾಮಿ, ರಸಪುರಿ, ಮಲ್ಲಿಕಾ, ಸಿಂಧೂರ, ತೋತಾಪುರಿ, ದಶೇರಿ ಸೇರಿದಂತೆ ವಿವಿಧ ಮಾವು ತಳಿಗಳ ಹಣ್ಣುಗಳು ಮೇಳದಲ್ಲಿ ಮಾರಾಟಕ್ಕೆ ಲಭ್ಯ ಇರಲಿವೆ. ಹಲಸಿನಲ್ಲಿ ರುದ್ರಾಕ್ಷಿ, ಶಿವರಾತ್ರಿ, ಏಕಾದಶಿ ಮತ್ತು ತೂಬಗೆರೆ ತಳಿಯ ಹಣ್ಣು ಇರಲಿವೆ’ ಎಂದರು.

‘ಬೆಳೆಗಾರರು ಮತ್ತು ಗ್ರಾಹಕರ ನಡುವೆ ನೇರ ಸಂಪರ್ಕ ಕಲ್ಪಿಸಿ, ರಿಯಾಯಿತಿ ದರದಲ್ಲಿ ಗ್ರಾಹಕರಿಗೆ ರುಚಿಕರ ಹಣ್ಣುಗಳನ್ನು ಮಾರಾಟ ಮಾಡಲಾಗುತ್ತಿದೆ’ ಎಂದು ಹೇಳಿದರು.

‘ಜಿಬಿಎ ವ್ಯಾಪ್ತಿಯ ಪೂರ್ವ, ಪಶ್ಚಿಮ, ಕೇಂದ್ರ, ಉತ್ತರ, ದಕ್ಷಿಣ ಭಾಗಗಳಲ್ಲಿ ಈ ಬಾರಿ ಮಾವು ಮೇಳಗಳನ್ನು ಆಯೋಜಿಸಲು ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಈ ಬಗ್ಗೆ ಪಾಲಿಕೆಯ ಆಯುಕ್ತರೊಂದಿಗೆ ಮಾತನಾಡುತ್ತಿದ್ದೇವೆ’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-4-1799829981

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.