ಬೆಂಗಳೂರು: 'ಎಲ್ಲೆಲ್ಲಿ ಪ್ರವಾಹ ಸೃಷ್ಟಿಯಾಗುವ ಸಾಧ್ಯತೆ ಇದೆ, ಗಾಳಿಯ ವೇಗ ಎಷ್ಟು ಪ್ರಮಾಣದಲ್ಲಿ ಇರಲಿದೆ, ಎಲ್ಲೆಲ್ಲಿ ಎಷ್ಟು ಪ್ರಮಾಣದಲ್ಲಿ ಮಳೆ ಬೀಳಲಿದೆ, ಯಾವ ಭಾಗದಲ್ಲಿ ಎಚ್ಚರಿಕೆ ವಹಿಸಬೇಕು ಎನ್ನುವ ಮಾಹಿತಿಯನ್ನು ನೀಡುವ ವ್ಯವಸ್ಥೆಯನ್ನು ಶೀಘ್ರದಲ್ಲೇ ಬಿಬಿಎಂಪಿ ವ್ಯಾಪ್ತಿಯಲ್ಲಿ ಜಾರಿಗೆ ತರಲಾಗುವುದು' ಎಂದು ಕಂದಾಯ ಸಚಿವ ಆರ್.ಅಶೋಕ ತಿಳಿಸಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಮಳೆಗಾಲದಲ್ಲಿ ಅನಾಹುತ ನಡೆಯದಂತೆ ತಡೆಯಲು ವಹಿಸಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಮೇಯರ್ ಎಂ.ಗೌತಮ್ ಕುಮಾರ್ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಭೆಯ ಬಳಿಕ ಅವರು ಸುದ್ದಿಗಾರರಿಗೆ ತಿಳಿಸಿದರು.

ನಗರದಲ್ಲಿ ಮಳೆ ಅನಾಹುತ ತಪ್ಪಿಸುವ ನಿಟ್ಟಿನಲ್ಲಿ ಕಂದಾಯ ವಿಭಾಗದಲ್ಲಿರುವ ಕರ್ನಾಟಕ ವಿಪತ್ತು ನಿರ್ವಹಣಾ ತಂಡವನ್ನು ಬಳಸಿಕೊಳ್ಳಲಾಗುವುದು.

ಪ್ರತಿದಿನ ಹವಾಮಾನ ವರದಿ ಬಂದ ಕೂಡಲೇ ನಗರದಲ್ಲಿ ಎಲ್ಲೆಲ್ಲಿ ಮಳೆಯಾಗಲಿದೆ, ಎಲ್ಲಿ ಎಚ್ಚರಿಕೆ ವಹಿಸಬೇಕು ಎನ್ನುವ ನಿಟ್ಟಿನಲ್ಲಿ ಕಂದಾಯ ಇಲಾಖೆಯಿಂದ ನೇರ ಸಂದೇಶ ಕಳುಹಿಸಲಾಗುವುದು. 'ಬೆಂಗಳೂರಿನಲ್ಲಿ ಈಗಾಗಲೇ 210 ಪ್ರವಾಹ ಪೀಡಿತ ಪ್ರದೇಶಗಳನ್ನು ಗುರುತಿಸಲಾಗಿದೆ. ಇನ್ನು ವಿಪತ್ತು ನಿರ್ವಹಣಾ ತಂಡದಿಂದ 21 ರಾಜಕಾಲುವೆಗಳಲ್ಲಿ ಸೆನ್ಸರ್ ಅಳವಡಿಕೆ ಮಾಡಲಾಗಿದ್ದು, ಇಲ್ಲಿ ಶೇ.75 ರಷ್ಟು ನೀರು ತುಂಬಿದರೆ ಎಚ್ಚರಿಕೆಯ ಸಂದೇಶ ರವಾನೆಯಾಗುತ್ತದೆ. ಇದರ ಆಧಾರದ ಮೇಲೆ ಕ್ರಮ ತೆಗೆದುಕೊಳ್ಳಲಾಗುವುದು. ಅಲ್ಲದೆ ಪ್ರವಾಹ ಉಂಟಾಗುವ ಪ್ರಮುಖ ಪ್ರದೇಶಗಳಲ್ಲಿ ಸೆನ್ಸರ್‌ಗಳನ್ನು ಅಳವಡಿಕೆ ಮಾಡುವ ಚಿಂತನೆ ಇದೆ' ಎಂದು ತಿಳಿಸಿದರು.

ನಗರದಲ್ಲಿ ಮರಗಳು ಬಿದ್ದ ವೇಳೆ ಪೊಲೀಸ್ ಸಿಬ್ಬಂದಿ ಕೂಡಲೇ ಬ್ಯಾರಿಕೇಡ್ ವ್ಯವಸ್ಥೆ ಮಾಡಬೇಕು. ವಿದ್ಯುತ್ ತಂತಿಗಳ ಅನಾಹುತ ಹಾಗೂ ಅವಘಡ ತಪ್ಪಿಸುವ ಉದ್ದೇಶದಿಂದ ಈ ಕ್ರಮಕ್ಕೆ ಸೂಚಿಸಲಾಗಿದೆ. ಸಿವಿಲ್ ಡಿಫೆನ್ಸ್ ನಿಂದ 500 ಜನ ಸಿಬ್ಬಂದಿ ನೇಮಕ ಮಾಡಿಕೊಳ್ಳಲಾಗುತ್ತಿದೆ. ಇದರ ಸಂಪೂರ್ಣ ವೆಚ್ಚವನ್ನು ಪಾಲಿಕೆ ವಹಿಸಲಿದೆ. ಅಲ್ಲದೆ, ನಗರದಲ್ಲಿ ತೆರೆದಿರುವ ಎಲ್ಲ ಒಳಚರಂಡಿಗಳನ್ನು ಕೂಡಲೆ ಮುಚ್ಚುವಂತೆ ಜಲಮಂಡಳಿ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ರಾತ್ರಿ ವೇಳೆ ಮರ ಕಡಿಯಲು ಪ್ಲಡ್ ಲೈಟ್‌ಗಳ ವ್ಯವಸ್ಥೆ ಮಾಡಿಕೊಳ್ಳಲು ಸೂಚನೆ ನೀಡಲಾಗಿದೆ ಎಂದರು.

ನಗರದಲ್ಲಿ ಮಳೆ ಅನಾಹುತ ತಪ್ಪಿಸಲು ಹಲವು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಬಿಬಿಎಂಪಿ, ಅರಣ್ಯ ಇಲಾಖೆ, ಬೆಸ್ಕಾಂ, ಜಲಮಂಡಳಿ, ಸಂಚಾರಿ ಪೊಲೀಸ್ ಇಲಾಖೆ ಸೇರಿದಂತೆ ವಲಯವಾರು ವಿಪತ್ತು ನಿರ್ವಹಣಾ ತಂಡಗಳನ್ನು ರಚನೆ ಮಾಡಲಾಗಿದೆ' ಎಂದು ತಿಳಿಸಿದರು.

ಪಾಲಿಕೆ, ಜಲಮಂಡಳಿ, ಅಗ್ನಿಶಾಮಕ, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್ಎನ್ಎಂಡಿಸಿ), ಬೆಸ್ಕಾಂ, ಸಂಚಾರಿ ವಿಭಾಗ ಹಾಗೂ ಸಂಬಂಧಪಟ್ಟ ಇತರೆ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಯಿತು. ಉಪಮೇಯರ್ ರಾಮಮೋಹನ ರಾಜು, ಆಯುಕ್ತರು ಬಿ.ಎಚ್.ಅನಿಲ್ ಕುಮಾರ್, ವಿಶೇಷ ಆಯುಕ್ತರು(ಆಡಳಿತ) ಅನ್ಬುಕುಮಾರ್, ವಿಶೇಷ ಆಯುಕ್ತರು(ಘನತ್ಯಾಜ್ಯ) ಡಿ.ರಂದೀಪ್, ಡಾ. ಶ್ರೀನಿವಾಸ್ ರೆಡ್ಡಿ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ ಗೌಡ, ಸಂಚಾರಿ ವಿಭಾಗದ ಜಂಟಿ ಆಯುಕ್ತರು ರವಿಕಾಂತೆ ಗೌಡ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಇತರ ನಗರಗಳಲ್ಲೂ ತಂಡ

ರಾಜ್ಯದಲ್ಲಿ ಮಳೆ ಅನಾಹುತ ತಪ್ಪಿಸಲು ವಿಪತ್ತು ನಿರ್ವಹಣಾ ತಂಡದ ಅಡಿಯಲ್ಲಿ ಹಿರಿಯ ಅಧಿಕಾರಿಗಳನ್ನು ಒಳಗೊಂಡ ತಂಡ ರಚನೆ ಮಾಡಲು ಸೂಚಿಸಲಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಅನಾಹುತ ತಪ್ಪಿಸಲು ಈ ತಂಡ ಕ್ರಮ ವಹಿಸಲಿದೆ ಇದೇ ಮಾದರಿಯಲ್ಲಿ ನಗರದಲ್ಲೂ ಹಿರಿಯ ಅಧಿಕಾರಿಗಳ ತಂಡ ರಚನೆ ಮಾಡಲು ಸೂಚಿಸಲಾಗಿದೆ ಎಂದರು.

ರಾಜ್ಯದಲ್ಲಿ ಮಳೆಯಿಂದ ಸೃಷ್ಟಿಯಾಗಬಹುದಾದ ಪ್ರವಾಹ ತಪ್ಪಿಸುವ ನಿಟ್ಟಿನಲ್ಲಿ ವಿಪತ್ತು ನಿರ್ವಹಣಾ ತಂಡಕ್ಕೆ 310 ಕೋಟಿ ರೂ. ಮೀಸಲಿಡಲಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರವಾಹ ಸ್ಥಿತಿ ಸೃಷ್ಟಿಯಾದರೆ ಕಲ್ಯಾಣ ಮಂಟಪಗಳಲ್ಲಿ ವ್ಯವಸ್ಥೆ ಮಾಡಲಾಗುತ್ತಿದೆ. ಅಲ್ಲಿ ಸೂಕ್ತ ಮೂಲಸೌಕರ್ಯ ಇರುವುದಿಲ್ಲ ಎಂಬ ಕಾರಣಕ್ಕಾಗಿ ಪ್ರವಾಹ ಭೀತಿ ಇರುವ ಜಿಲ್ಲೆಗಳಲ್ಲಿ ಶಾಶ್ವತ ಕೇಂದ್ರ ತೆರೆಯಲು ಕ್ರಮವಹಿಸಲಾಗುತ್ತಿದೆ. ಇದರಲ್ಲಿ ಆಸ್ಪತ್ರೆ, ಅಡುಗೆ ಕೊಠಡಿ, ಶೌಚಾಲಯ, ಹಾಸಿಗೆ ವ್ಯವಸ್ಥೆ ಎಲ್ಲವೂ ಇರಲಿದೆ ಇದಕ್ಕೆ ಅಂದಾಜು 10ರಿಂದ 15 ಕೋಟಿ ರೂ. ಆಗುವ ಸಾಧ್ಯತೆ ಇದೆ ಎಂದರು.

ಮಳೆಗಾಲಕ್ಕೆ ಸಕಲ ಸಿದ್ಧತೆ

ಬಿಬಿಎಂಪಿ ವ್ಯಾಪ್ತಿಯಲ್ಲಿ ಮುಂಗಾರು ಮಳೆಯಿಂದ ಉಂಟಾಗುವ ಅನಾಹುತಗಳನ್ನು ತಪ್ಪಿಸಲು ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಸಂಬಂಧ ಇಂದು ನಗರದ ಟೌನ್ ಹಾಲ್ ಮುಂಭಾಗ ಮಳೆ ಮುಂಜಾಗೃತ ಕ್ರಮ ತೆಗೆದುಕೊಳ್ಳುವ ವಸ್ತು ಪ್ರದರ್ಶನ ಏರ್ಪಡಿಸಲಾಗಿತ್ತು. ಪಾಲಿಕೆ, ಅಗ್ನಿಶಾಮಕ ಇಲಾಖೆಯಲ್ಲಿ ಮರಗಳನ್ನು ತೆರವುಗೊಳಿಸುವ ತಂಡ ಹಾಗೂ ಅವಶ್ಯಕ ಸಾಮಗ್ರಿಗಳು, ಹೈ ಫ್ರಷರ್ ಪಂಪ್, ಅಗ್ನಿಶಾಮಕ ವಾಹನ, ಲೈಫ್ ಬೋಟ್, ಲೈಫ್ ಜಾಕೆಟ್ ಸೇರಿದಂತೆ ಇನ್ನಿತರೆ ಅವಶ್ಯಕ ಸಾಮಗ್ರಿಗಳಿದ್ದು, ಮಳೆಗಾಲದಲ್ಲಿ ತೆಗೆದುಕೊಳ್ಳಬೇಕಾದ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.

ರಾಜಕಾಲುವೆಗಳ ಹೂಳು ತೆರವು

ಬಿಬಿಎಂಪಿ ವ್ಯಾಪ್ತಿಯಲ್ಲಿ ಮಳೆ ಮುಂಜಾಗ್ರತಾ ಕ್ರಮವಾಗಿ ರಾಜಕಾಲುವೆಗಳಲ್ಲಿ ತುಂಬಿರುವ ಹೂಳನ್ನು ನಿರಂತರವಾಗಿ ತೆರವುಗೊಳಿಸಲಾಗುತ್ತಿದೆ. ಅದರಂತೆ ಇಂದು ಬೊಮ್ಮನಹಳ್ಳಿ ವ್ಯಾಪ್ತಿಯ ಅಗರ ಕೆರೆ ಹಾಗೂ ಜಕ್ಕಸಂದ್ರ ಬಳಿ ರಾಜಕಾಲುವೆಯಲ್ಲಿ ಹೂಳು ತೆರವುಗೊಳಿಸಲಾಯಿತು..

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.