ಬೆಂಗಳೂರು: ಜಿಬಿಎ ವ್ಯಾಪ್ತಿ ಹೊರತುಪಡಿಸಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು(ಬಿಡಿಎ) ‘ಪರಿಷ್ಕೃತ ಮಾಸ್ಟರ್ ಪ್ಲ್ಯಾನ್ 2041 (ಮಹಾ ಯೋಜನೆ)’ ಸಿದ್ಧಪಡಿಸಲು ಮುಂದಾಗಿದ್ದು, ಸಾರ್ವಜನಿಕರಿಂದ ಸಲಹೆಗಳನ್ನು ಆಹ್ವಾನಿಸಿದೆ.

ಪ್ರಾಧಿಕಾರದ ಸ್ಥಳೀಯ ಯೋಜನಾ ಪ್ರದೇಶದ ವ್ಯಾಪ್ತಿಯಲ್ಲಿರುವ ಒಟ್ಟು 242 ಹಳ್ಳಿಗಳನ್ನು ಒಳಗೊಂಡಂತೆ ಮಹಾ ಯೋಜನೆ ಸಿದ್ಧಪಡಿಸುವ ಪ್ರಕ್ರಿಯೆ ಆರಂಭಿಸಿದೆ.

ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ –1961ರ ಕಲಂ 10ರ ಅಡಿಯಲ್ಲಿ ಸರ್ಕಾರ ನೀಡಿರುವ ಅಧಿಸೂಚನೆ ಅನ್ವಯ ಮಹಾ ಯೋಜನೆ ಸಿದ್ಧಪಡಿಸಲಾಗುತ್ತಿದೆ.

ಯೋಜನೆಯ ಕುರಿತು ಸಾರ್ವಜನಿಕರು ತಮ್ಮ ಅಭಿಪ್ರಾಯ, ಸಲಹೆಗಳನ್ನು ಲಿಖಿತ ರೂಪದಲ್ಲಿ ಸಲ್ಲಿಸಲು ಅವಕಾಶ ಎರಡು ತಿಂಗಳು ಗಳವರೆಗೂ (ಜೂನ್ 6ರವರೆಗೆ) ಕಾಲಾವಕಾಶವನ್ನು ಕಲ್ಪಿಸಲಾಗಿದೆ.

ನಗರ ಯೋಜನಾ ಸದಸ್ಯರು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ನಗರ ಯೋಜನಾ ವಿಭಾಗ, ಚೌಡಯ್ಯ ರಸ್ತೆ, ಕುಮಾರ ಪಾರ್ಕ್ ಪಶ್ಚಿಮ, ಬೆಂಗಳೂರು –560020 ಈ ವಿಳಾಸಕ್ಕೆ ನೇರವಾಗಿ/ ಅಂಚೆ ಮೂಲಕ ಅಥವಾ ಇ ಮೇಲ್ bda_rmp2041@ka.gov.in ಸಲಹೆಗಳನ್ನು ಕಳುಹಿಸಲು ಅವಕಾಶ ನೀಡಿದೆ.

ಮಾಹಿತಿಗೆ ಬಿಡಿಎ ಸಹಾಯವಾಣಿ ಸಂಖ್ಯೆ 9483166622 ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260421-4-1724986533

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.