ಬೆಂಗಳೂರು: ಕೆಂಗೇರಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಆರ್.ಆರ್ ನಗರ ಮೆಡಿಕಲ್ ಕಾಲೇಜು ಎದುರು ದ್ವಿಚಕ್ರ ವಾಹನ ಹಾಗೂ ಟಿಪ್ಪರ್ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಎಂಬಿಬಿಎಸ್ ವಿದ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಆರ್.ಆರ್.ನಗರ ನಿವಾಸಿ ಕೃತಿಕಾ(21) ಮೃತ ವಿದ್ಯಾರ್ಥಿನಿ.

ಘಟನೆಯಲ್ಲಿ ಕೃತಿಕಾ ಸ್ನೇಹಿತೆ ಹಂಸ(22) ಅವರಿಗೂ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸಂಚಾರ ಪೊಲೀಸರು ಹೇಳಿದರು.

ಬುಧವಾರ ಸಂಜೆ 4.30ರ ಸುಮಾರಿಗೆ ಅಪಘಾತ ಸಂಭವಿಸಿದೆ.

ಆರ್.ಆರ್.ನಗರದ ಬಿಇಎಂಎಲ್ ಲೇಔಟ್ ನಿವಾಸಿ ಕೃತಿಕಾ ಅವರು ಆರ್.ಆರ್.ಮೆಡಿಕಲ್ ಕಾಲೇಜಿನಲ್ಲಿ 2ನೇ ವರ್ಷದ ಎಂಬಿಬಿಎಸ್ ಓದುತ್ತಿದ್ದರು. ಸ್ನೇಹಿತೆ ಹಂಸ ಅವರ ಜತೆಗೆ ದ್ವಿಚಕ್ರ ವಾಹನದಲ್ಲಿ ಕಾಲೇಜಿನಿಂದ ಹೊರಗಡೆ ಬರುತ್ತಿದ್ದರು. ಅದೇ ವೇಳೆ ನಗರದ ಕಡೆಯಿಂದ ಮೈಸೂರು ಕಡೆಗೆ ಅತೀ ವೇಗವಾಗಿ ಹೋಗುತ್ತಿದ್ದ ಟಿಪ್ಪರ್, ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಹಿಂಬದಿ ಕುಳಿತಿದ್ದ ಕೃತಿಕಾ ಕೆಳಗೆ ಬಿದ್ದಿದ್ದರು. ಅವರ ಮೇಲೆಯೇ ಟಿಪ್ಪರ್ ಲಾರಿಯ ಚಕ್ರಗಳು ಹರಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಸಂಚಾರ ಪೊಲೀಸರು ಹೇಳಿದರು.

ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ, ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗಿದೆ. ಟಿಪ್ಪರ್ ಚಾಲಕ ಸಂಜೀವ್ ಚೌಧರಿ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಸಂಚಾರ ಪೊಲೀಸರು ಹೇಳಿದರು.

ಕೆಂಗೇರಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.