ಬೆಂಗಳೂರು: ಆನ್ಲೈನ್ ಔಷಧ ಮಾರಾಟ ವಿರೋಧಿಸಿ ಔಷಧ ವ್ಯಾಪಾರಿಗಳು ಇದೇ 20ರಂದು ದೇಶದಾದ್ಯಂತ ಮುಷ್ಕರ ನಡೆಸುತ್ತಿರುವ ಕಾರಣ, ಜೀವರಕ್ಷಕ ಔಷಧಗಳು ಕೊರತೆ ಆಗದಂತೆ ಕ್ರಮ ವಹಿಸಲು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದೆ.

ಇ-ಫಾರ್ಮಸಿ ವೇದಿಕೆಗಳು ಒದಗಿಸುವ ಭಾರಿ ರಿಯಾಯಿತಿಯನ್ನೂ ವಿರೋಧಿಸಿರುವ ಆಲ್ ಇಂಡಿಯಾ ಆರ್ಗನೈಸೇಷನ್ ಆಫ್ ಕೆಮಿಸ್ಟ್ ಆ್ಯಂಡ್ ಡ್ರಗ್ಗಿಸ್ಟ್, ದೇಶದಾದ್ಯಂತ ಮುಷ್ಕರಕ್ಕೆ ಕರೆ ನೀಡಿದೆ.

‘ಔಷಧ ವ್ಯಾಪಾರಿಗಳ ಸಂಘದ ರಾಜ್ಯ ಪದಾಧಿಕಾರಿ ಗಳೊಂದಿಗೆ ಆನ್ಲೈನ್ ವೇದಿಕೆ ಮೂಲಕ ಸಭೆ ನಡೆಸಿ, ಅವರ ಅಭಿಪ್ರಾಯ ಸಂಗ್ರಹಿಸಲಾಗಿದೆ. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಜೀವರಕ್ಷಕ ಔಷಧಗಳು ಜನರಿಗೆ ಲಭ್ಯವಾಗುವಂತಾಗಲುಆಸ್ಪತ್ರೆ ಹಾಗೂ ನರ್ಸಿಂಗ್ ಹೋಮ್ ಆವರಣದಲ್ಲಿ ಇರುವ ಔಷಧ ಮಳಿಗೆಗಳನ್ನು ಮುಚ್ಚದಿರಲು ಮನವಿ ಮಾಡಲಾಗಿದೆ’ ಎಂದು ಇಲಾಖೆ ಆಯುಕ್ತ ಕೆ.ಶ್ರೀನಿವಾಸ ತಿಳಿಸಿದ್ದಾರೆ.

‘ರಾಜ್ಯದ ಎಲ್ಲ ಜಿಲ್ಲಾ ಆರೋಗ್ಯಾಧಿಕಾರಿ ಗಳು ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವರಕ್ಷಕ ಔಷಧ ಕೊರತೆಯಾಗದಂತೆ ಕ್ರಮವಹಿಸಲಿದ್ದಾರೆ. ಜಿಲ್ಲಾಮಟ್ಟ ದಲ್ಲಿ ಸಹಾಯಕ ಔಷಧ ನಿಯಂತ್ರಕರನ್ನು ನೋಡಲ್ ಅಧಿಕಾರಿಯಾಗಿ ಕಾರ್ಯನಿರ್ವಹಿಸಲು ಸೂಚಿಸಲಾಗಿದೆ’ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-4-1767485866

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.