ಬೆಂಗಳೂರು: ನಗರದ ಮೆಟ್ರೊ ನಿಲ್ದಾಣವೊಂದನ್ನು ಸ್ಫೋಟಿಸುವುದಾಗಿ ಇ–ಮೇಲ್ ಮೂಲಕ ಬೆದರಿಕೆ ಸಂದೇಶ ಕಳುಹಿಸಿದ್ದ ಆರೋಪಿಯನ್ನು ವಿಲ್ಸನ್ ಗಾರ್ಡನ್ ಠಾಣೆಯ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಬೆಳತ್ತೂರಿನ ಎರಡನೇ ಮುಖ್ಯರಸ್ತೆ, ಆರನೇ ಕ್ರಾಸ್ ನಿವಾಸಿ ರಾಜೀವ್ (62) ಬಂಧಿತ.

ಬೆಂಗಳೂರು ಮೆಟ್ರೊ ರೈಲು ನಿಗಮದ (ಬಿಎ೦ಆರ್ಸಿಎಲ್) ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ರತೀಶ್ ಅವರು ನೀಡಿದ ದೂರಿನ ಮೇರೆಗೆ ಭಾರತೀಯ ನ್ಯಾಯ ಸಂಹಿತೆ 351 (2), 351(3) ಅಡಿ ರಾಜೀವ್ ವಿರುದ್ಧ ಪ್ರಕರಣ ದಾಖಲಾಗಿತ್ತು.

ನವೆಂಬರ್ 11ರಂದು ರಾತ್ರಿ 11.25ಕ್ಕೆ ಬಿಎಂಆರ್ಸಿಎಲ್ ಅಧಿಕೃತ ಇ–ಮೇಲ್ ವಿಳಾಸಕ್ಕೆ ಬೆದರಿಕೆ ಸಂದೇಶ ಬಂದಿತ್ತು. ರಾಜೀವ್ ಶೆಟ್ಟಿ ಹೆಸರಿನ ಇ–ಮೇಲ್ ವಿಳಾಸದಿಂದ ರಾಜೀವ್ ಸಂದೇಶ ಕಳುಹಿಸಿ ಬೆದರಿಕೆ ಹಾಕಿದ್ದರು.

‘ವಿಚ್ಛೇದಿತ ಪತ್ನಿಗೆ ಮೆಟ್ರೊ ಸಿಬ್ಬಂದಿ ತಮ್ಮ ಕೆಲಸ ಮುಗಿದ ಮೇಲೆ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆ. ಎಚ್ಚರಿಕೆಯಿಂದ ಇರಿ. ಇದು ಮುಂದುವರಿದರೆ ಯಾವುದಾದರೂ ಮೆಟ್ರೊ ನಿಲ್ದಾಣವನ್ನು ಸ್ಫೋಟಿಸುತ್ತೇನೆ’ ಎಂದು ಆರೋಪಿ ಇ–ಮೇಲ್ನಲ್ಲಿ ಉಲ್ಲೇಖಿಸಿದ್ದರು.

‘ರಾಜೇಶ್ ಅವರು ಕಳೆದ ಐದು ವರ್ಷದಿಂದ ಮಾನಸಿಕ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. 15 ವರ್ಷಗಳ ಹಿಂದೆ ಪತ್ನಿಯಿಂದ ವಿಚ್ಛೇದನ ಪಡೆದುಕೊಂಡಿದ್ದರು. ಪತ್ನಿ ಪ್ರತ್ಯೇಕವಾಗಿ ಬಾಡಿಗೆ ಮನೆಯಲ್ಲಿ ನೆಲಸಿದ್ದಾರೆ. ವಿಚ್ಛೇದಿತ ಪತ್ನಿ ಮೆಟ್ರೊ ಉದ್ಯೋಗಿ ಅಲ್ಲ’ ಎಂದು ಪೊಲೀಸರು ಹೇಳಿದರು.

‘ಆರೋಪಿ ಮಾನಸಿಕ ಅಸ್ವಸ್ಥನಾಗಿರುವ ಕಾರಣಕ್ಕೆ ಇ–ಮೇಲ್ನಲ್ಲಿ ಬೆದರಿಕೆ ಸಂದೇಶ ಕಳುಹಿಸಿದ್ದಾರೆ ಎಂಬುದು ಗೊತ್ತಾಗಿದೆ. ತನಿಖೆ ಮುಂದುವರಿದಿದೆ’ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.