ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುಪಿಎಸ್‌ಸಿ ಪರೀಕ್ಷೆ: ಈ ಭಾನುವಾರ ಬೆಳಿಗ್ಗೆ 6ರಿಂದಲೇ ಮೆಟ್ರೊ ರೈಲುಗಳ ಸಂಚಾರ

ಬಿಎಂಆರ್‌ಸಿಎಲ್ ಪ್ರಕಟಣೆ ವಿವರ ಇಲ್ಲಿದೆ..
Published 26 ಮೇ 2023, 13:11 IST
Last Updated 26 ಮೇ 2023, 13:11 IST
ಅಕ್ಷರ ಗಾತ್ರ

ಬೆಂಗಳೂರು: ಕೇಂದ್ರ ಲೋಕ ಸೇವಾ ಆಯೋಗದ (ಯುಪಿಎಸ್‌ಸಿ) ಪೂರ್ವಭಾವಿ ಪರೀಕ್ಷೆ ಮೇ 28ರಂದು(ಭಾನುವಾರ) ನಡೆಯುತ್ತಿದ್ದು, ಅಂದು ಮೆಟ್ರೊ ರೈಲುಗಳ ಸಂಚಾರ ಬೆಳಿಗ್ಗೆ 6ರಿಂದಲೇ ಆರಂಭವಾಗಲಿವೆ.

ಪ್ರತಿ ಭಾನುವಾರ ಬೆಳಿಗ್ಗೆ 7 ಗಂಟೆಯಿಂದ ಸಂಚಾರ ಆರಂಭವಾಗುತ್ತಿತ್ತು. ಪರೀಕ್ಷೆಗೆ ಬರುವ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಲು ಒಂದು ಗಂಟೆ ಮುಂಚಿತವಾಗಿ ರೈಲುಗಳ ಸಂಚಾರ ಆರಂಭಿಸಲಾಗುತ್ತಿದೆ. ನಾಗಸಂದ್ರ, ರೇಷ್ಮೆ ಸಂಸ್ಥೆ, ಕೆಂಗೇರಿ, ಬೈಯಪ್ಪನಹಳ್ಳಿ, ಕೆ.ಆರ್‌.ಪುರ ಮತ್ತು ವೈಟ್‌ಫೀಲ್ಡ್‌ ನಿಲ್ದಾಣಗಳಿಂದ ಮೊದಲ ರೈಲುಗಳು ಬೆಳಿಗ್ಗೆ 6 ಗಂಟೆಗೆ ಹೊರಡಲಿವೆ ಎಂದು ಬಿಎಂಆರ್‌ಸಿಎಲ್ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT